‘ರೈಲಿನಿಂದ ಎಸೆದದ್ದು ಮೂವರನ್ನಲ್ಲ, ಐವರನ್ನು’

ಗುರುವಾರ , ಜೂನ್ 20, 2019
26 °C

‘ರೈಲಿನಿಂದ ಎಸೆದದ್ದು ಮೂವರನ್ನಲ್ಲ, ಐವರನ್ನು’

Published:
Updated:

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ತಂದೆ ತನ್ನ ಮೂವರು ಹೆಣ್ಣು ಮಕ್ಕಳನ್ನು ಹೊರಗೆಸೆದಿದ್ದ ಪ್ರಕರಣದಲ್ಲಿ ಪೊಲೀಸರಿಗೆ ಗುರುವಾರ ಮತ್ತಷ್ಟು ಮಾಹಿತಿ ಲಭ್ಯವಾಗಿದೆ.

ಇದರ ಅನ್ವಯ, ಆತ ತನ್ನ ಪತ್ನಿ ಅಫ್ರೀನ್‌ ಮತ್ತು ನಾಲ್ವರು ಹೆಣ್ಣು ಮಕ್ಕಳನ್ನು ಹೊರಗೆಸೆದಿದ್ದು, ಅಫ್ರೀನ್‌ ಹಾಗೂ ಒಬ್ಬ ಮಗಳು ಮುನ್ನಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈತ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ತನ್ನ ಮೂವರು ಹೆಣ್ಣು ಮಕ್ಕಳನ್ನು ರೈಲಿನಿಂದ ಹೊರಗೆಸೆದಿದ್ದ ಎಂದು ಈ ಮೊದಲು ವರದಿಯಾಗಿತ್ತು.

ತಾಯಿ ಹಾಗೂ ಮಗುವಿನ ಮೃತದೇಹಗಳು ಬೇರೆಬೇರೆ ಪ್ರದೇಶಗಳಲ್ಲಿ ಪತ್ತೆಯಾಗಿವೆ. ಅಲ್ಬುಲ್‌ (12) ಮತ್ತು ಸಲೀಮಾಖಾತೂನ್‌ (4) ಅವರ ಸ್ಥಿತಿ ಗಂಭೀರವಾಗಿದೆ. ರಬಿಯಾ ಎಂಬ ಮಗುವಿಗೆ ಲಖನೌನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಕೆಯ ಸ್ಥಿತಿ ಸುಧಾರಿಸಿದ ನಂತರ ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸ್‌ ಅಧಿಕಾರಿ ಎ.ಕೆ.ಸಿಂಗ್ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry