ಪಕ್ಷದ ನಿರ್ಧಾರಕ್ಕೆ ಬದ್ಧ: ಶಿವಪಾಲ್‌ ಯಾದವ್‌

ಸೋಮವಾರ, ಮೇ 20, 2019
33 °C

ಪಕ್ಷದ ನಿರ್ಧಾರಕ್ಕೆ ಬದ್ಧ: ಶಿವಪಾಲ್‌ ಯಾದವ್‌

Published:
Updated:

ಸಂಭಾಲ್‌ (ಉತ್ತರ ಪ್ರದೇಶ): ‘ಪಕ್ಷ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದು ಸಮಾಜವಾದಿ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಿವಪಾಲ್‌ ಯಾದವ್‌ ಗುರುವಾರ ಹೇಳಿದ್ದಾರೆ.

‘ಸದ್ಯಕ್ಕೆ ನಾನು ಸಮಾಜವಾದಿ ಪಕ್ಷದಲ್ಲಿ ಯಾವುದೇ ಹುದ್ದೆ ಹೊಂದಿಲ್ಲ. ಆದರೆ ನಾನು ಪಕ್ಷದ ನಿಜವಾದ ಯೋಧ’ ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪನಾದ ಶಿವಪಾಲ್‌ ಕಾರ್ಯಕ್ರಮವೊಂದರಲ್ಲಿ ಹೇಳಿದರು.

‘ಪಕ್ಷದೊಂದಿಗೆ ನನಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಮಾಜವಾದಿ ಪಕ್ಷ ಮತ್ತೊಮ್ಮೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಲಿದೆ ಹಾಗೂ ಅಖಿಲೇಶ್‌ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ’ ಎಂದು ಹೇಳಿದರು.

ಕೌಟುಂಬಿಕ ಕಲಹವನ್ನು ಅಲ್ಲಗಳೆದ ಅವರು, ‘ಎಲ್ಲ ಕುಟುಂಬಗಳಲ್ಲೂ ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ, ನನ್ನದೂ ಅದರಲ್ಲಿ ಒಂದು’ ಎಂದು ಪ್ರತಿಕ್ರಿಯಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry