ಪಿಎಫ್‌ಐ ನಿಷೇಧಕ್ಕೆ ಆಗ್ರಹಿಸಿ ವಾಹನ ಜಾಥಾ

ಸೋಮವಾರ, ಜೂನ್ 17, 2019
31 °C

ಪಿಎಫ್‌ಐ ನಿಷೇಧಕ್ಕೆ ಆಗ್ರಹಿಸಿ ವಾಹನ ಜಾಥಾ

Published:
Updated:

ಬೆಂಗಳೂರು: ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆಯು ಇದೇ 28 ಹಾಗೂ 29 ರಂದು ವಾಹನ ಜಾಥಾ ಹಾಗೂ ಜನಜಾಗೃತಿ ಜಾಥಾ ಹಮ್ಮಿಕೊಂಡಿದೆ.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಖಜಾಂಚಿ ಆರ್.ನಾಗೇಂದ್ರ ಪ್ರಸಾದ್, ‘28ರಂದು ಮಂಗಳೂರಿನ ಮಣ್ಣಗುಡ್ಡೆಯ ಸಂಘನಿಕೇತನದಿಂದ ಹಾಗೂ 29ರಂದು ಬೆಂಗಳೂರಿನ ಪುರಭವನದಿಂದ ಹೊರಡುವ ವಾಹನ ಜಾಥಾವು ಸಂಜೆ ವೇಳೆಗೆ ಮೈಸೂರು ತಲುಪಲಿದೆ. ಬಳಿಕ ಅಲ್ಲಿನ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ’ ಎಂದರು.

‘ಪಿಎಫ್‌ಐ ಸಂಘಟನೆಯು ದೇಶದ್ರೋಹಿ ಚಿಂತನೆ ಹೊಂದಿದೆ. ರಾಜ್ಯದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಆ ಸಂಘಟನೆಯೇ ಕಾರಣ. ಪಿಎಫ್‌ಐ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಆಯೋಜಿಸಿದ್ದೇವೆ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry