‘ವೈರಿಗಳು ಒಗ್ಗೂಡಿದರೆ ನನಗೇ ಲಾಭ’

ಬುಧವಾರ, ಜೂನ್ 19, 2019
25 °C

‘ವೈರಿಗಳು ಒಗ್ಗೂಡಿದರೆ ನನಗೇ ಲಾಭ’

Published:
Updated:

ಬೆಂಗಳೂರು: ‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ರಾಜಕೀಯ ವೈರಿಗಳೆಲ್ಲಾ ಒಂದಾದರೆ ಚುನಾವಣೆಯಲ್ಲಿ ನನಗೇ ಲಾಭ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.

‘ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಈ ಬಾರಿ ಗೆಲ್ಲಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರಲ್ಲಾ’ ಎಂಬ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾರು ಗೆಲ್ಲಬೇಕು ಎಂಬುದನ್ನು ಅಲ್ಲಿನ ಮತದಾರರು ನಿರ್ಧರಿಸುತ್ತಾರೆ. ಎರಡು ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದು ಅವರೇನು ಕುಮಾರಸ್ವಾಮಿ ಅವರ ಜೇಬಿನಲ್ಲಿ ಇಲ್ಲ’ ಎಂದರು.

‘ನನ್ನ ರಾಜಕೀಯ ವೈರಿಗಳೆಲ್ಲ ಒಂದಾಗಬೇಕು. ಎಲ್ಲರೂ ಸಿದ್ದರಾಮಯ್ಯ ಅವರನ್ನು ಸೋಲಿಸುವುದಕ್ಕಾಗಿಯೇ ಒಂದಾಗಿದ್ದಾರೆ ಎಂದು ಅಲ್ಲಿನ ಮತದಾರರು ಭಾವಿಸಿ ಮತ್ತೆ ನನ್ನನ್ನು ಗೆಲ್ಲಿಸುತ್ತಾರೆ. ಆ ಬಗ್ಗೆ ಅನುಮಾನವಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಗುಜರಾತ್ ಚುನಾವಣಾ ಪ್ರಚಾರಕ್ಕೆ ಹೋಗುತ್ತೀರಾ’ ಎಂಬ ಪ್ರಶ್ನೆಗೆ, ‘ನನಗೆ ಕರ್ನಾಟಕ ನೋಡಿಕೊಂಡರೆ ಸಾಕಾಗಿದೆ’ ಎಂದು ಉತ್ತರಿಸಿದರು.

‘ಪ್ರಧಾನಿ ಮೋದಿ ಅವರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿಯೇ ಚುನಾವಣಾ ಆಯೋಗ ಕೊಂಚ ವಿಳಂಬವಾಗಿ ಗುಜರಾತ್ ಚುನಾವಣೆ ದಿನಾಂಕ ಘೋಷಿಸಿದೆ.

ಅಲ್ಲಿ ಭಾಷಣ ಮಾಡಲು ಮತ್ತು ಯೋಜನೆಗಳನ್ನು ಘೋಷಿಸಲು ಸಾಕಷ್ಟು ಸಮಯ ನೀಡಿದೆ’ ಎಂದು ಟೀಕಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry