ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಖಂಡನೆ

Last Updated 27 ಅಕ್ಟೋಬರ್ 2017, 5:15 IST
ಅಕ್ಷರ ಗಾತ್ರ

ಬೆಳಗಾವಿ: ‘ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಈಚೆಗೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ನ ಟ್ರಸ್ಟಿ ಬಸವರಾಜ ರೊಟ್ಟಿ ತಿಳಿಸಿದರು.

‘ಸ್ವತಂತ್ರ ಲಿಂಗಾಯತ ಧರ್ಮ ಹೋರಾಟಕ್ಕಾಗಿ ಶ್ರೀಗಳಿಗೆ ₹56 ಲಕ್ಷ ನಗದು ಹಾಗೂ ಕಾರು ನೀಡಲಾಗಿದೆ. ಸರ್ಕಾರದಿಂದ ₹2.5 ಕೋಟಿ ಅನುದಾನದ ಭರವಸೆ ಕೊಡಲಾಗಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಮಾಜದ ಒಗ್ಗಟ್ಟು ಮುರಿಯಲು ಪ್ರಯತ್ನಿಸುತ್ತಿವೆ’ ಎಂದು ಶಿವಶಂಕರಪ್ಪ ಅವರು ಹೇಳಿದ್ದಾರೆ. ಇದನ್ನು ಸಮಾಜ ತೀವ್ರವಾಗಿ ಖಂಡಿಸುತ್ತದೆ’’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಂಚಮಸಾಲಿ ಪೀಠ, ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಪೀಠದ ಭಕ್ತರಿಗೆ ಇದರಿಂದ ನೋವಾಗಿದೆ. ಸ್ವತಂತ್ರ ಲಿಂಗಾಯತ ಧರ್ಮದ ಹೋರಾಟದ ದಿಕ್ಕನ್ನು ತಪ್ಪಿಸಿ, ಹತ್ತಿಕ್ಕುವ ಪಿತೂರಿ ಇದಾಗಿದೆ. ಹೋರಾಟಕ್ಕೆ ಅಭೂತಪೂರ್ವ ಬೆಂಬಲ ದೊರೆತದ್ದನ್ನು ಸಹಿಸ ಲಾಗದೆ ಹತಾಶರಾಗಿ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT