ಹಣಕ್ಕಾಗಿ ಸಚಿವರಿಗೆ ಬೆದರಿಕೆ ಹಾಕಿದ್ದ ಆರೋಪ; ಪತ್ರಕರ್ತ ವಿನೋದ್‌ ವರ್ಮಾ ಬಂಧನ

ಬುಧವಾರ, ಜೂನ್ 26, 2019
28 °C

ಹಣಕ್ಕಾಗಿ ಸಚಿವರಿಗೆ ಬೆದರಿಕೆ ಹಾಕಿದ್ದ ಆರೋಪ; ಪತ್ರಕರ್ತ ವಿನೋದ್‌ ವರ್ಮಾ ಬಂಧನ

Published:
Updated:
ಹಣಕ್ಕಾಗಿ ಸಚಿವರಿಗೆ ಬೆದರಿಕೆ ಹಾಕಿದ್ದ ಆರೋಪ; ಪತ್ರಕರ್ತ ವಿನೋದ್‌ ವರ್ಮಾ ಬಂಧನ

ಗಾಜಿಯಾಬಾದ್‌: ಛತ್ತೀಸ್‌ಗಡದ ಸಚಿವರೊಬ್ಬರಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪತ್ರಕರ್ತ ವಿನೋದ್‌ ವರ್ಮಾ ಅವರನ್ನು ಛತ್ತೀಸ್‌ಗಡ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸಚಿವರೊಬ್ಬರು ಭಾಗಿಯಾಗಿದ್ದಾರೆನ್ನಲಾದ ಲೈಂಗಿಕ ಕ್ರಿಯೆಯ ವಿಡಿಯೊ ಸಿಡಿ ಇಟ್ಟುಕೊಂಡಿದ್ದ ವಿನೋದ್‌ ವರ್ಮಾ ಹಣಕ್ಕಾಗಿ ಅವರಿಗೆ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.

‘ಇಂದಿರಾಪುರದಲ್ಲಿರುವ ವಿನೋದ್‌ ಅವರ ನಿವಾಸದಿಂದ ಅವರನ್ನು ಬಂಧಿಸಲಾಗಿದೆ. ಅವರಿಗೆ ಸೇರಿದ ಲ್ಯಾಪ್‌ಟಾಪ್‌, ಪೆನ್‌ಡ್ರೈವ್‌ ಹಾಗೂ ಸಿಡಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

‘ಬಿಬಿಸಿ’ಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದ ವಿನೋದ್‌ ಕೆಲಕಾಲ ‘ಅಮರ್‌ ಉಜಾಲಾ’ದ ಡಿಜಿಟಲ್‌ ಆವೃತ್ತಿಯ ಸಂಪಾದಕರಾಗಿದ್ದರು. ಸದ್ಯ ಅವರು ಬಿಡುವಿನ ಬರಹಗಾರ (ಫ್ರೀಲಾನ್ಸರ್‌) ಆಗಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry