ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕದಾಸ ಜಯಂತಿ ಆಚರಣೆ ನ. 6ರಂದು

Last Updated 27 ಅಕ್ಟೋಬರ್ 2017, 6:30 IST
ಅಕ್ಷರ ಗಾತ್ರ

ಧಾರವಾಡ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ. 6ರಂದು ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಭಕ್ತ ಕನಕದಾಸರ ಜಯಂತಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರು ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಜಯಂತಿ ಅಂಗವಾಗಿ ಜನಪದ ಕಲಾ ತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ, ಉಪನ್ಯಾಸ ಆಯೋಜಿಸಲಾಗಿದೆ. ಎಲ್ಲ ಶಾಲೆ ಹಾಗೂ ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸುವಂತೆ ತಿಳಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ, ಯಲ್ಲಮ್ಮ ನಾಯ್ಕರ, ಬಸವರಾಜ ಗುಡೆಣ್ಣವರ, ಲೀಲಾವತಿ ಕಳಸಪ್ಪನವರ, ರಾಜೇಶ್ವರಿ ಸಾಲಗಟ್ಟಿ, ಹೇಮಂತ ಗೊರ್ಲಹೊಸೂರ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎಸ್.ಜಿ. ಕೊರವರ, ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ, ಪೊಲೀಸ್ ಇನ್‌ಸ್ಪೆಕ್ಟರ್‌ ಮೋತಿಲಾಲ್ ಪವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT