ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ದುಸ್ಥರ

Last Updated 27 ಅಕ್ಟೋಬರ್ 2017, 6:51 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಕಳೆದ ವಾರ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಮೆಡ್ಲೇರಿ ಕೆರೆ ಕೋಡಿ ಬಿದ್ದ ಪರಿಣಾಮ ನೀರು ಹರಿದು ರಸ್ತೆ ಸಂಪೂರ್ಣ ಹಾಳಾಗಿದ್ದು, ತಗ್ಗು ಗುಂಡಿಗಳು ನಿರ್ಮಾಣ ಆಗಿವೆ. ಗ್ರಾಮದ ಸರ್ಕಾರಿ ಹಳೇ ಆಸ್ಪತ್ರೆಯ ಬಳಿಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನೀರಿನ ರಭಸಕ್ಕೆ ಡಾಂಬರ್‌ ಕೊಚ್ಚಿ ಹೋಗಿದೆ. ಹೀಗಾಗಿ, ಸಂಚಾರಕ್ಕೆ ತುಂಬ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

‘ಮೆಡ್ಲೇರಿ ಗ್ರಾಮಕ್ಕೆ ಇದು ಮುಖ್ಯ ರಸ್ತೆಯಾಗಿದ್ದು, ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತದೆ. ರಾತ್ರಿ ವೇಳೆ ರಸ್ತೆಯ ಗುಂಡಿಗಳಲ್ಲಿ ಬಿದ್ದು ಹಲವರು ಗಾಯಗೊಂಡ ಘಟನೆಗಳು ನಡೆದಿವೆ.

ಆದ್ದರಿಂದ, ಶೀಘ್ರವೇ ಈ ರಸ್ತೆಯನ್ನು ದುರಸ್ತಿ ಮಾಡಬೇಕು’ ಎಂದು ಸ್ಥಳೀಯ ನಿವಾಸಿ ಎಸ್‌.ಎಚ್.ಮೇಟಿ ಒತ್ತಾಯಿಸಿದರು.
ಗ್ರಾಮದಲ್ಲಿ ಸೋಮವಾರ ನಡೆಯುವ ವಾರದ ಸಂತೆಯ ದಿನದಂದು ಟಂಟಂ ಹಾಗೂ ಸರಕು ಸಾಗಿಸುವ ಮಿನಿ ವಾಹನಗಳು ಈ ರಸ್ತೆಯ ಮಧ್ಯದಲ್ಲಿಯೇ ಕೆಟ್ಟು ನಿಲ್ಲುತ್ತವೆ. ಬೈಕ್‌ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ರಸ್ತೆಯನ್ನು ದಾಟುವಂತಾಗಿದೆ ಎಂದರು.

‘ಈ ರಸ್ತೆಯನ್ನು ತಾತ್ಕಾಲಿಕವಾಗಿ ಸರಿಪಡಿಸಿದರೆ ಸಾಲದು. ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣಕ್ಕೆ ತಾತ್ಕಾಲಿಕವಾಗಿ ಹಾಕುವ ಗೊರ್ಚು, ಕಡಿ ಎರಡೇ ದಿನದಲ್ಲಿ ಕಿತ್ತು ಹೋಗುತ್ತದೆ’ ಎಂದು ಎಪಿಎಂಸಿ ಸದಸ್ಯ ಬಸವರಾಜ ಹುಲ್ಲತ್ತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT