ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಹಿರಿಯರ ಚಿಂತನೆ ಅವಶ್ಯ

Last Updated 27 ಅಕ್ಟೋಬರ್ 2017, 8:20 IST
ಅಕ್ಷರ ಗಾತ್ರ

ಮುಳಬಾಗಿಲು: ‘ಹಿರಿಯ ನಾಗರಿಕರು ಈ ರಾಷ್ಟ್ರದ ಸಂಪತ್ತು. ಅವರ ಅನುಭವಗಳು ಮತ್ತು ಚಿಂತನೆಗಳು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬಹಳಷ್ಟು ಅತ್ಯವಶ್ಯಕ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಶ್ರೀಧರ್ ಹೇಳಿದರು. ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿಯು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರನ್ನು ನಿರ್ಲಕ್ಷ್ಯದಿಂದ ಕಾಣುವುದು ಹಾಗೂ ಅಗೌರವದಿಂದ ನಡೆಸಿಕೊಳ್ಳುವುದು ಸಮಾಜದ ಆರೋಗ್ಯಕರ ಬೆಳವಣಿಗೆಗೆ ಸರಿಯಲ್ಲ ಎಂದರು.
ಇತ್ತೀಚಿನ ದಿನಗಳಲ್ಲಿ ವಯೋವೃದ್ಧ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪ್ರವೃತ್ತಿ ಹೆಚ್ಚುತ್ತಿದೆ ಎಂದರು.

ಹಿರಿಯ ನಾಗರಿಕರ ಹಿತರಕ್ಷಣಾ ಕಾಯ್ದೆ ಮತ್ತು ಸರ್ಕಾರಿ ಸೌಲಭ್ಯಗಳ ಕುರಿತು ವಕೀಲ ಎಂ.ವರದಾರೆಡ್ಡಿ ಉಪನ್ಯಾಸ ನೀಡಿದರು. ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ತಿಮ್ಮರಾಯಪ್ಪ, ಕಾರ್ಯದರ್ಶಿ ಪಿ.ನಟರಾಜ್, ವಕೀಲರಾದ ಎನ್.ಪ್ರಭಾಕರ್, ಎಂ.ಎಸ್.ಶ್ರೀನಿವಾಸರೆಡ್ಡಿ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಂಜುಂಡಪ್ಪ, ಕಾರ್ಯದರ್ಶಿ ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT