ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಮ್ಮ ಗುರಿಯಾಗಬೇಕು

ಸೋಮವಾರ, ಜೂನ್ 17, 2019
25 °C

ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಮ್ಮ ಗುರಿಯಾಗಬೇಕು

Published:
Updated:

ಉಪ್ಪಿನಂಗಡಿ: ಪ್ರಧಾನಿ ನರೇಂದ್ರ ಮೋದಿಯ ಅಭಿವೃದ್ದಿಶೀಲ ಕಾರ್ಯವೈಖರಿಯಿಂದ ದೇಶ ಹೊಸ ಚೈತನ್ಯ ಪಡೆದುಕೊಂಡಿದ್ದು, ಅವರ ಆಡಳಿತಕ್ಕೆ ಬಲ ತುಂಬುವ ಸಲುವಾಗಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ನಿರ್ಮಾಣ ಮಾಡುವುದು ನಮ್ಮ ಗುರಿಯಾಗಬೇಕು ಎಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು.

ಬಿಜೆಪಿ ಯುವ ಮೋರ್ಚಾದ ವತಿಯಿಂದ ಕಾಂಗ್ರೆಸ್ ಮುಕ್ತ ಭಾರತದ ಸಂಕಲ್ಪದೊಂದಿಗೆ ನವಕರ್ನಾಟಕ ನಿರ್ಮಾಣ ಅಂಗವಾಗಿ ಬಿಳಿನೆಲೆಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಶಕ್ತಿ ಶಾಲಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಸ್ವಚ್ಛ ಹಾಗೂ ಅಭಿವೃದ್ದಿಶೀಲ ಆಡಳಿತದ ಕಾರ್ಯವೈಖರಿಯನ್ನು ಕಂಡು ದೇಶದಾದ್ಯಂತ ಯುವ ಜನಾಂಗ ಬಿಜೆಪಿಯೊಂದಿಗೆ ಕೈಜೋಡಿಸುತ್ತಿದ್ದು, ಇಡೀ ಭಾರತ ದೇಶವನ್ನು ಕಾಂಗ್ರೆಸ್ ಮುಕ್ತ ಬಿಜೆಪಿಯನ್ನಾಗಿಸುವುದರೊಂದಿಗೆ ಕರ್ನಾಟಕದ ಕಾಂಗ್ರೆಸ್ ಅನ್ನು ಕಿತ್ತೊಗೆದು ನವಕರ್ನಾಟಕ ನಿರ್ಮಾಣ ಮಾಡುವಲ್ಲಿ ಯುವಜನಾಂಗ ಪಣತೊಡಬೇಕು ಎಂದರು.

ಕಡಬ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ವಾಡ್ಯಪ್ಪ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶದ ಪ್ರಧಾನಿಯವರ ಜನಪರ ಯೋಜನೆಗಳನ್ನು ಪ್ರತೀ ಬೂತ್ ಮಟ್ಟದಲ್ಲಿ ಮತದಾರರಿಗೆ ತಿಳಿಸುವುದಲ್ಲದೆ ಕಾಂಗ್ರೆಸ್‍ನ ದುರ್ನಡತೆಯ ಬಗ್ಗೆ ಜನತೆಯನ್ನು ಎಚ್ಚರಿಸುವ ಜವಾಬ್ದಾರಿ ನಮ್ಮದಾಗಿದ್ದು ಈ ಬಾರೀ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ತರುವಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ ಎಂದರು.

ಬಿಳಿನೆಲೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ವಿಜಯಕುಮಾರ್ ಮಾತನಾಡಿದರು. ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಉಪಾಧ್ಯಕ್ಷ ಸುರೇಶ್ ಗೌಡ, ಬಿಳಿನೆಲೆ ಸಿಎ ಬೇಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ, ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಇದ್ದರು. ಯುವಮೋರ್ಚಾ ಸದಸ್ಯ ರಾಜೇಶ್ ಸ್ವಾಗತಿಸಿ, ಹರ್ಷಿತ್ ವಂದಿಸಿದರು. ಸರೋಜಿನಿ ಜಯಪ್ರಕಾಶ್ ನಿರೂಪಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry