ರೈತರ ಸಾಲಮನ್ನಾ ಮಾಡಿಸದ ಬಿಜೆಪಿ

ಬುಧವಾರ, ಜೂನ್ 26, 2019
28 °C

ರೈತರ ಸಾಲಮನ್ನಾ ಮಾಡಿಸದ ಬಿಜೆಪಿ

Published:
Updated:
ರೈತರ ಸಾಲಮನ್ನಾ ಮಾಡಿಸದ ಬಿಜೆಪಿ

ಮೈಸೂರು: ಕೇಂದ್ರ ಸರ್ಕಾರದಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಾಗದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರೈತರ ಸಮಾವೇಶವನ್ನು ಯಾವ ಪುರಷಾರ್ಥಕ್ಕೆ ಮಾಡುತ್ತಿದ್ದಾರೆ ಎಂದು ಸಂಸದ ಆರ್. ಧ್ರುವನಾರಾಯಣ ವ್ಯಂಗ್ಯವಾಡಿದರು.

ವರುಣಾ ಕ್ಷೇತ್ರದ ಭುಗತಗಳ್ಳಿಯಲ್ಲಿ ಗುರುವಾರ ನಡೆದ ವಿವಿಧ ಗ್ರಾಮಗಳ ₹ 11 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ‘ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರ ಮೇಲೆ ಗೋಲಿಬಾರ್ ನಡೆಯಿತು’ ಎಂದರು.

ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಿಸಲಾಗದವರು ಕೇವಲ ರೈತರ ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಜಿ.ಪಂ. ಸದಸ್ಯೆ ಪ್ರೇಮಾ ಮಹದೇವಯ್ಯ, ತಾ.ಪಂ. ಸದಸ್ಯ ಮುದ್ದುರಾಮೇಗೌಡ, ಮುಖಂಡರಾದ

ಭುಗತಗಳ್ಳಿ ಮಣಿ, ರಾಯನಹುಂಡಿ ರವಿ, ಬೆಲವತ್ತ ಶಿವಕುಮಾರ್, ಚಂದ್ರಶೇಖರ್, ಸಿದ್ದಯ್ಯ, ಚಿಕ್ಕದೇವಯ್ಯ, ವಾಜಮಂಗಲ ರವಿ, ಪಟ್ಟೆಹುಂಡಿ ಕಲ್ಪನಾ, ಹೆಳವರಹುಂಡಿ ಸೋಮು, ನಿವೃತ್ತ ಪ್ರಾಂಶುಪಾಲ ಸಿದ್ದಯ್ಯ, ಗ್ರಾಮದ ಪಿಡಿಒ ವಿಶ್ವನಾಥ್ ಭಾಗವಹಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry