ವಿದ್ಯುತ್ ಲೈನ್‌ಗೆ ಭೂಮಿ: ಪರಿಹಾರ ನೀಡಲು ರೈತರ ಆಗ್ರಹ

ಬುಧವಾರ, ಜೂನ್ 19, 2019
31 °C

ವಿದ್ಯುತ್ ಲೈನ್‌ಗೆ ಭೂಮಿ: ಪರಿಹಾರ ನೀಡಲು ರೈತರ ಆಗ್ರಹ

Published:
Updated:

ಮಾಗಡಿ: ತುಮಕೂರಿನಿಂದ ಮಾಗಡಿ ಮಾರ್ಗವಾಗಿ ಧರ್ಮಪುರಿಗೆ ಹೋಗುವ ಪವರ್ ಗ್ರಿಡ್ 765 ಕೆ.ವಿ.ವಿದ್ಯುತ್ ಲೈನ್ ಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡುವಂತೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಆಗ್ರಹಿಸಿದ್ದಾರೆ.

ಪವರ್ ಗ್ರಿಡ್ 765 ಕೆ.ವಿ. ವಿದ್ಯುತ್ ಲೈನ್ ಎಂಜಿನಿಯರ್‌ಗಳು ಜಮೀನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಹಾಗೂ ಇತರರು ಪೊಲೀಸ್ ಠಾಣಿಗೆ ಹಾಗೂ ತಹಶೀಲ್ದಾರ್ ಎನ್.ಕೆ.ಲಕ್ಷ್ಮೀಸಾಗರ್‌ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದರು.

ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಲಕ್ಷ್ಮೀಸಾಗರ್ ಅವರು, ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಎಂಜಿನಿಯರ್‌ಗೆ ಸೂಚಿಸಿದರು. ಪರಿಹಾರ ನೀಡಲು ವಿಳಂಬ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘದ ಮುಖಂಡರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry