ಸೆಲ್ಫಿ ಮೋಹಕ್ಕೆ ಇಬ್ಬರು ಮಹಿಳೆಯರು ಬಲಿ

ಭಾನುವಾರ, ಜೂನ್ 16, 2019
32 °C

ಸೆಲ್ಫಿ ಮೋಹಕ್ಕೆ ಇಬ್ಬರು ಮಹಿಳೆಯರು ಬಲಿ

Published:
Updated:
ಸೆಲ್ಫಿ ಮೋಹಕ್ಕೆ ಇಬ್ಬರು ಮಹಿಳೆಯರು ಬಲಿ

ಕೊರಾಪುಟ್‌: ಸೆಲ್ಫಿ ಮೋಹಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿರುವ ಘಟನೆ ಒಡಿಶಾದ ರಾಯಗಡ ಜಿಲ್ಲೆಯಿಂದ ವರದಿಯಾಗಿದೆ.

ಮೃತ ಮಹಿಳೆಯರನ್ನು ಜ್ಯೋತಿ (27) ಮತ್ತು  ಶ್ರೀದೇವಿ (23) ಎಂದು ಗುರುತಿಸಲಾಗಿದೆ. ಇವರು ಆಂಧ್ರಪ್ರದೇಶದವರಾಗಿದ್ದು ಇಲ್ಲಿನ ನಾಗಬಲಿ ನದಿಯಲ್ಲಿ ಸೆಲ್ಫಿ ತೆಗೆದು ಕೊಳ್ಳುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶಾಖಪಟ್ಟಣದಿಂದ ಒಂಬತ್ತು ಮಹಿಳೆಯರ ತಂಡ ರಾಯಗಡ ಪ್ರವಾಸಕ್ಕೆ ಬಂದಿದ್ದರು. ಇಲ್ಲಿನ ಹೊರವಲಯದಲ್ಲಿರುವ ನಾಗಬಲಿ ನದಿಯ ಸೇತುವೆ ಬಳಿ ಸಾಕಷ್ಟು ಸೆಲ್ಫಿ ಫೋಟೊಗಳನ್ನು ತೆಗೆದುಕೊಂಡಿದ್ದಾರೆ. ನಂತರ ಮತ್ತಷ್ಟು ಫೋಟೊ ತೆಗೆದುಕೊಳ್ಳುವ ಸಲುವಾಗಿ ನದಿಗೆ ಇಳಿದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರ ನೆರವಿನಿಂದ  ಅಗ್ನಿ ಶಾಮಕ ಸಿಬ್ಬಂದಿ ಶವಗಳನ್ನು ಹೊರ ತೆಗೆದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry