ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಲೂವೇಲ್ ಜಾಗೃತಿ ಕಾರ್ಯಕ್ರಮ ಪ್ರಸಾರ ಮಾಡಲು ದೂರದರ್ಶನಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Last Updated 27 ಅಕ್ಟೋಬರ್ 2017, 20:16 IST
ಅಕ್ಷರ ಗಾತ್ರ

ನವದೆಹಲಿ: ‘ಬ್ಲೂ ವೇಲ್ ಆನ್‌ಲೈನ್ ಆಟದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ರೂಪಿಸಿ, ಪ್ರಸಾರ ಮಾಡಿ’ ಎಂದು ದೂರದರ್ಶನಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

‘ಬ್ಲೂ ವೇಲ್ ಆಟವನ್ನು ನಿಷೇಧಿಸಲು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ’ ಎಂದು ಮನವಿ ಮಾಡಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ಈ ನಿರ್ದೇಶನ ನೀಡಿದೆ.

‘ಈ ಆಟದ ಲಿಂಕ್‌ಗಳು ಜನರಿಗೆ ಲಭ್ಯವಾಗದಂತೆ ತಡೆಯಲು ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರವು ಸಂಬಂಧಿತ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ’ ಎಂದು ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ನರಸಿಂಹ ಹೇಳಿದರು.

‘ಒಂದು ಆಟ ಜನರ ಜೀವವನ್ನು ತೆಗೆಯುತ್ತದೆ ಎಂದ ಮೇಲೆ ಅದನ್ನು ನಿಲ್ಲಿಸಲೇಬೇಕು. ದೂರದರ್ಶನ ಒಂದು ವಾರದ ಒಳಗೆ ಈ ಸಂಬಂಧ ಅರಿವು ಮೂಡಿಸುವ ಕಾರ್ಯಕ್ರಮವನ್ನು ರೂಪಿಸಬೇಕು. ಖಾಸಗಿ ವಾಹಿನಿಗಳಲ್ಲೂ ಆ ಕಾರ್ಯಕ್ರಮವನ್ನು ಮುಖ್ಯ ವೇಳೆಯಲ್ಲಿ (ಪ್ರೈಮ್ ಟೈಮ್‌) ಪ್ರಸಾರ ಮಾಡಬೇಕು’ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT