ಕೇಸರಿ ಶಾಲು ಹೊದಿಸಿ ಟೀಂ ಇಂಡಿಯಾ – ಕಿವೀಸ್‌ ಆಟಗಾರರಿಗೆ ಅದ್ದೂರಿ ಸ್ವಾಗತ

ಭಾನುವಾರ, ಜೂನ್ 16, 2019
22 °C

ಕೇಸರಿ ಶಾಲು ಹೊದಿಸಿ ಟೀಂ ಇಂಡಿಯಾ – ಕಿವೀಸ್‌ ಆಟಗಾರರಿಗೆ ಅದ್ದೂರಿ ಸ್ವಾಗತ

Published:
Updated:
ಕೇಸರಿ ಶಾಲು ಹೊದಿಸಿ ಟೀಂ ಇಂಡಿಯಾ – ಕಿವೀಸ್‌ ಆಟಗಾರರಿಗೆ ಅದ್ದೂರಿ ಸ್ವಾಗತ

ಕಾನ್ಪುರ: ಇಲ್ಲಿನ ಗ್ರೀನ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಭಾರತ –ನ್ಯೂಜಿಲೆಂಡ್‌ ನಡುವಣ ಮೂರನೇ ಏಕದಿನ ಕ್ರಿಕೆಟ್‌ ಪಂದ್ಯ ಭಾನುವಾರ ನಡೆಯಲಿದ್ದು, ಉಭಯ ತಂಡದ ಆಟಗಾರರು ಕಾನ್ಪುರಕ್ಕೆ ಬಂದಿಳಿದರು. ಇದೇ ವೇಳೆ, ಉಭಯ ತಂಡದ ಆಟಗಾರರನ್ನು ಕೇಸರಿ ಶಾಲು ಹೊದಿಸಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

2016ರಲ್ಲಿ ಉಭಯ ತಂಡಗಳ ನಡುವೆ ಇದೇ ಕ್ರೀಡಾಂಗಣದಲ್ಲಿ ಟೆಸ್ಟ್‌ ಪಂದ್ಯ ನಡೆದಿತ್ತು. ಭಾರತ ಆಡಿದ 500ನೇ ಟೆಸ್ಟ್‌ ಪಂದ್ಯ ಇದಾಗಿತ್ತು.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ 1–1ರಲ್ಲಿ ಸಮಬಲ ಸಾಧಿಸಿವೆ.

ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 6 ವಿಕೆಟ್‌ ಜಯ ಸಾಧಿಸಿತ್ತು.

ಪುಣೆಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಭಾರತ 6 ವಿಕೆಟ್‌ ಜಯ ಸಾಧಿಸಿತ್ತು.

ಸರಣಿ ಮೇಲೆ ಕಣ್ಣಿಟ್ಟಿರುವ ಉಭಯ ತಂಡಗಳಿಗೆ ಭಾನುವಾರ ನಡೆಯುವ ಮೂರನೇ ಏಕದಿನ ಪಂದ್ಯ ಮಹತ್ವದಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry