ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ಗೆ ಲಾಭ

Last Updated 27 ಅಕ್ಟೋಬರ್ 2017, 19:38 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌, ಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ₹ 260 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ₹357 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣ ಶೇ 27 ರಷ್ಟು ಇಳಿಕೆ ಕಂಡಿದೆ.

‘ಬ್ಯಾಂಕ್‌ನ ಒಟ್ಟು ವರಮಾನ ₹12,187 ಕೋಟಿಗಳಿಂದ ₹ 11,995 ಕೋಟಿಗಳಿಗೆ ಇಳಿಕೆಯಾಗಿದೆ’ ಎಂದು ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ರಾಕೇಶ್‌ ಶರ್ಮಾ ಅವರು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹1,558 ಕೋಟಿಗಳಿಂದ ₹1,950 ಕೋಟಿಗಳಿಗೆ ಏರಿಕೆಯಾಗಿದೆ. ವಸೂಲಿಯಾಗದ ಸಾಲದ (ಎನ್‌ಪಿಎ) ಪ್ರಮಾಣವೂ ಶೇ 6.69 ರಿಂದ ಶೇ 7.02ಕ್ಕೆ ಏರಿದೆ. ಹೀಗಾಗಿ ನಿವ್ವಳ ಲಾಭದಲ್ಲಿ ಇಳಿಕೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT