ಉಗ್ರರ ವಿರುದ್ಧ ಕ್ರಮಕೈಗೊಳ್ಳಿ

ಶುಕ್ರವಾರ, ಮೇ 24, 2019
29 °C

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ

Published:
Updated:

ವಾಷಿಂಗ್ಟನ್‌: ಉಗ್ರಗಾಮಿ ಸಂಘಟನೆಗಳ ವಿರುದ್ಧ ಪಾಕಿಸ್ತಾನ ಕಠಿಣ ಕ್ರಮ ಕೈಗೊಳ್ಳದಿದ್ದರೆ, ವಿಭಿನ್ನ ರೀತಿಯ ಕಾರ್ಯತಂತ್ರಗಳನ್ನು ರೂಪಿಸುವ ಮೂಲಕ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

‘ತನ್ನ ನೆಲದಲ್ಲಿರುವ ಉಗ್ರರ ಸುರಕ್ಷಿತ ತಾಣಗಳನ್ನು ನಿರ್ಮೂಲನೆ ಮಾಡಲೇಬೇಕು ಎಂದು ವಿದೇಶಾಂಗ ಕಾರ್ಯದರ್ಶಿ ರೆಕ್ಸ್‌ ಟಿಲ್ಲರ್‌ಸನ್‌ ಅವರು ಪಾಕಿಸ್ತಾನಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಹೀಥರ್‌ ನೌರ್ಟ್‌ ತಿಳಿಸಿದ್ದಾರೆ.

‘ಹಲವು ಬಾರಿ ಅಮೆರಿಕದ ನಿರೀಕ್ಷೆಗಳನ್ನು ಪಾಕಿಸ್ತಾನಕ್ಕೆ ತಿಳಿಸಲಾಗಿದೆ. ಟಿಲ್ಲರ್‌ಸನ್‌ ಅವರು ಪಾಕಿಸ್ತಾನದ ಭೇಟಿ ಸಂದರ್ಭದಲ್ಲೂ ಮತ್ತೊಮ್ಮೆ ಉಗ್ರಗಾಮಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಜಿನಿವಾದಲ್ಲೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಿಲ್ಲರ್‌ಸನ್‌ ಅವರು, ‘ಉಗ್ರರ ವಿರುದ್ಧ ಯಾವ ರೀತಿಯ ಕಾರ್ಯಾಚರಣೆ ಕೈಗೊಳ್ಳಬೇಕು ಎನ್ನುವುದು ಪಾಕಿಸ್ತಾನದ ವಿವೇಚನೆಗೆ ಬಿಡಲಾಗಿದೆ. ಒಂದು ವೇಳೆ ಸಾಧ್ಯವಾಗದಿದ್ದರೆ ನಾವು ರೂಪಿಸುವ ಕಾರ್ಯತಂತ್ರಗಳಿಗೆ ಪಾಕಿಸ್ತಾನ ಹೊಂದಾಣಿಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry