ಗರ್ಭಿಣಿ ಸೇರಿ ಇಬ್ಬರ ಆತ್ಮಹತ್ಯೆ

ಶುಕ್ರವಾರ, ಜೂನ್ 21, 2019
22 °C

ಗರ್ಭಿಣಿ ಸೇರಿ ಇಬ್ಬರ ಆತ್ಮಹತ್ಯೆ

Published:
Updated:

ಬೆಂಗಳೂರು: ಯಲಹಂಕದ ಕೊಂಡಪ್ಪಲೇಔಟ್‌ನಲ್ಲಿ ಐದು ತಿಂಗಳ ಗರ್ಭಿಣಿ ಅನುಷ್ಕಾ (22) ಹಾಗೂ ಜ್ಞಾನಭಾರತಿ ಸಮೀಪದ ಮುನೇಶ್ವರನಗರದಲ್ಲಿ ನೇತ್ರಾವತಿ (33) ಎಂಬುವರು ನೇಣಿಗೆ ಶರಣಾಗಿದ್ದಾರೆ.

ಆಂಧ್ರಪ್ರದೇಶದ ಅನುಷ್ಕಾ, ಶಿವಕುಮಾರ್ ಅವರನ್ನು 3 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ.

‘ಪತ್ನಿ ಮಗು ಜತೆ ಮಲಗಿದ್ದಳು. ನಾನು ನಡುಮನೆಯಲ್ಲಿ ಮಲಗಿಕೊಂಡೆ. ಬೆಳಿಗ್ಗೆ ಕೋಣೆಗೆ ಹೋಗಿ ನೋಡಿದಾಗ ನೇಣು ಹಾಕಿಕೊಂಡಿದ್ದಳು’ ಎಂದು ಶಿವಕುಮಾರ್ ಹೇಳಿಕೆ ಕೊಟ್ಟಿದ್ದಾಗಿ ಯಲಹಂಕ ಪೊಲೀಸರು ತಿಳಿಸಿದ್ದಾರೆ.

‘‌ಖಾಸಗಿ ಕಂಪೆನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಅಳಿಯ, ಕೆಲಸ ಬಿಟ್ಟಿದ್ದ. ವರದಕ್ಷಿಣೆಗಾಗಿ ಆತ ನೀಡುತ್ತಿದ್ದ ಕಿರುಕುಳ ತಾಳಲಾರದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಮೃತರ ಪೋಷಕರು ಆರೋಪಿಸಿದ್ದಾರೆ.

ಮತ್ತೊಂದು ಪ್ರಕರಣ: ಮಂಡ್ಯ ಜಿಲ್ಲೆಯವರಾದ ನೇತ್ರಾವತಿ, ಕಟ್ಟಡ ಗುತ್ತಿಗೆದಾರ ಮುನಿಸ್ವಾಮಿ ಎಂಬುವರನ್ನು ಒಂಬತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಆರು ವರ್ಷದ ಮಗಳಿದ್ದಾಳೆ.

‘ಗುರುವಾರ ರಾತ್ರಿ ನೇತ್ರಾವತಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದರು. ಮಗಳ ಜತೆ ಹೊರಗೆ ಹೋಗಿದ್ದ ಮುನಿಸ್ವಾಮಿ, 8.30ರ ಸುಮಾರಿಗೆ ವಾಪಸಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತರ ಪೋಷಕರ ದೂರನ್ನು ಆಧರಿಸಿ ವರದಕ್ಷಿಣೆ ಕಿರುಕುಳ ಅಡಿ ಮುನಿಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜ್ಞಾನಭಾರತಿ ಪೊಲೀಸರು ಮಾಹಿತಿ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry