ಸಂಚಾರ ನಿಯಮ ಉಲ್ಲಂಘಿಸಿದ ಶಾಸಕ: ವಿಡಿಯೊ ವೈರಲ್‌

ಸೋಮವಾರ, ಜೂನ್ 24, 2019
29 °C

ಸಂಚಾರ ನಿಯಮ ಉಲ್ಲಂಘಿಸಿದ ಶಾಸಕ: ವಿಡಿಯೊ ವೈರಲ್‌

Published:
Updated:
ಸಂಚಾರ ನಿಯಮ ಉಲ್ಲಂಘಿಸಿದ ಶಾಸಕ: ವಿಡಿಯೊ ವೈರಲ್‌

ಬೆಂಗಳೂರು: ಚಾಮರಾಜಪೇಟೆಯ ಶಾಸಕ ಜಮೀರ್‌ ಅಹ್ಮದ್‌ ಅವರು ಬುಧವಾರ ರಾತ್ರಿ ಹೆಲ್ಮೆಟ್‌ ಧರಿಸದೆ ಸಿಗ್ನಲ್‌ ಜಂಪ್‌ ಮಾಡಿ ದ್ವಿಚಕ್ರ ವಾಹನ ಓಡಿಸಿದ್ದಾರೆ. ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬುಧವಾರ ರಾತ್ರಿ ಕಾರ್ಯಕರ್ತರೊಬ್ಬರ ದ್ವಿಚಕ್ರ ವಾಹನ ಪಡೆದುಕೊಂಡು ಖುದ್ದು ಅವರೇ ಓಡಿಸಿದ್ದಾರೆ. ಈ ವೇಳೆ ಅವರು ಹಾಗೂ ಹಿಂಬದಿ ಸವಾರ ಇಬ್ಬರೂ ಹೆಲ್ಮೆಟ್‌ ಹಾಕಿರಲಿಲ್ಲ.

‘ಏಕಮುಖ ರಸ್ತೆಯಲ್ಲೇ ಶಾಸಕರು ವಾಹನ ಓಡಿಸಿದ್ದಾರೆ. ಸಿಗ್ನಲ್‌ ಸಹ ಜಂಪ್‌ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡಿದ್ದಾರೆ. ಸ್ಥಳದಲ್ಲೇ ಸಂಚಾರ ಪೊಲೀಸರು ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸ್ಥಳೀಯರೊಬ್ಬರು ದೂರಿದರು.

ಈ ಬಗ್ಗೆ ಪೊಲೀಸರು, ‘ವಿಡಿಯೊ ಗಮನಿಸಿಲ್ಲ. ಸಂಬಂಧಪಟ್ಟ ಠಾಣೆಯಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇವೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry