ಸಿ ಮತ್ತು ಡಿ ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಿ

ಗುರುವಾರ , ಜೂನ್ 20, 2019
27 °C

ಸಿ ಮತ್ತು ಡಿ ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಿ

Published:
Updated:
ಸಿ ಮತ್ತು ಡಿ ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಿ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಯಾನ ಸಂಸ್ಥೆಗಳಲ್ಲಿ ಶೇಕಡ ನೂರರಷ್ಟು ವರ್ಗ ಸಿ ಮತ್ತು ಡಿ ವೃಂದದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲು ಇಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ ಸಿದ್ದರಾಮಯ್ಯ ತಾಕೀತು ಮಾಡಿದರು. ದೇವನಹಳ್ಳಿ ಕೆಂಪೇಗೌಡ ಆಂತರರಾಷ್ಟ್ರೀಯ ನಿಮಾನ ನಿಲ್ದಾಣದ ಕಚೇರಿ ಸಭಾಂಗಣದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಈ ವಿಮಾನನಿಲ್ದಾಣದಲ್ಲಿ 37 ವಿವಿಧ ಖಾಸಗಿ ಕಂಪೆನಿಗಳು ವಾಯಮಾರ್ಗಗಳಲ್ಲಿ ಹಾರಾಟ ನಡೆಸುತ್ತಿವೆ. ಈ ಸಂಸ್ಥೆಗಳಲ್ಲಿ ವರ್ಗ ಸಿ ಮತ್ತು ಡಿ ವೃಂದದ ಹುದ್ದೆಗಳಲ್ಲಿ ಶೇಕಡ 60 ರಷ್ಟು ಕನ್ನಡಿಗರು ಮಾತ್ರ ಉದ್ಯೋಗಗಳಾಗಿದ್ದಾರೆ. ಇನ್ನುಳಿದ ಹುದ್ದೆಗಳನ್ನು ಕನ್ನಡಿಗರು ಅದರಲ್ಲೂ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದರು.

ವಿಮಾನ ನಿಲ್ದಾಣ ಕನ್ನಡ ಉನ್ನತೀಕರಣ ಸಮಿತಿ ಉಪಾಧ್ಯಕ್ಷ ವೆಂಕಟರಮಣ ಮಾತನಾಡಿ, ವಾರ್ಷಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಸರಾ ಕನ್ನಡ ರಾಜ್ಯೋತ್ಸವ ವಿವಿಧ ರಾಷ್ಟ್ರೀಯ ಮತ್ತು ನಾಡಹಬ್ಬಗಳನ್ನು ಆಚರಿಸಲಾಗುತ್ತಿದೆ. ನಾಮಫಲಕ ಹಾಗೂ ಸಂಕೇತ ಫಲಕಗಳಲ್ಲಿ ಕನ್ನಡವನ್ನು ಬಳಸಲಾಗುತ್ತಿದೆ ಎಂದು ತಿಳಿಸಿದರು.

ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ ರಾಜ್ಯದ ಸಂಸ್ಕೃತಿ, ಕನ್ನಡ ಪ್ರಜ್ಞೆ ಮೂಡಿಸಲು ದಿನಪತ್ರಿಕೆ, ಪುಸ್ತಕ,  ಜಾಹೀರಾತುಗಳಲ್ಲಿ ಕನ್ನಡ ಬಳಸಬೇಕು. ಕನ್ನಡ ಚಲನಚಿತ್ರ ಮತ್ತು ಗೀತೆಗಳನ್ನು ಕೇಳಿಸಬೇಕು. ಅತ್ಯುತ್ತಮ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬೇಕು, ಕನ್ನಡ ಭಾಷೆ ಪರಿಣಾಮಕಾರಿಯಾಗಲು ಇನ್ನಷ್ಟು ಹೊಸಬಗೆಯ ಕನ್ನಡ ಕಾರ್ಯಕ್ರಮಗಳನ್ನು ರೂಪಿಸಿ ವಿಮಾನ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಸಾಂಸ್ಕೃತಿಕ ರಾಮಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕೃತ ವೆಬ್ ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು, ವಿಮಾನ ನಿಲ್ದಾಣದಲ್ಲಿ ಕನ್ನಡ ಪುಸ್ತಕ ಮಾರಾಟ ಮಳಿಗೆ ಆರಂಭ ಮಾಡಬೇಕು, ಸಿಬ್ಬಂದಿ ಕನ್ನಡದಲ್ಲಿ ವ್ಯವಹರಿಸಲು ಸೂಚಿಸಬೇಕು ಎಂದರು. ಕನ್ನಡ ಕಲಿಕಾ ತರಬೇತಿಗಳನ್ನು ಆಯೋಜಿಸಬೇಕಾಗಿದೆ ಎಂದರು. ಪ್ರಾಧಿಕಾರದ ಸದಸ್ಯರಾದ ಸಾಹಿತಿ ಡಾ. ಸಿದ್ದಲಿಂಗಯ್ಯ, ಮುಖ್ಯಮಂತ್ರಿ ಚಂದ್ರು, ರಿಜಿಸ್ಟಾರ್ ಮುರಳಿಧರ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry