ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಡಿವಾಳರನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸಿ’

Last Updated 28 ಅಕ್ಟೋಬರ್ 2017, 5:43 IST
ಅಕ್ಷರ ಗಾತ್ರ

ಬೀದರ್‌: ಪರಿಶಿಷ್ಟ ಜಾತಿಗಳ ಪಟ್ಟಿಗೆ ಮಡಿವಾಳರನ್ನು ಸೇರಿಸಬೇಕು ಎಂದು ಬೀದರ್‌ ಜಿಲ್ಲಾ ಮಡಿವಾಳ ಸಂಘದ ಶಿವಕುಮಾರ ಕಂದಗೂಳ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ 20 ಲಕ್ಷ ಮಡಿವಾಳರು ಇದ್ದು, ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ದೇಶದ 18 ರಾಜ್ಯಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ.

ರಾಜ್ಯದಲ್ಲಿ 1978ರಿಂದ ಮಡಿವಾಳ ಸಮಾಜದವರು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರ ಸಮಾಜದ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೇರಲು ಅಕ್ಟೋಬರ್ 30ರಂದು ಬೀದರ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT