ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಸರು ಗದ್ದೆಯಾದ ಪ್ರಾಥಮಿಕ ಶಾಲಾ ಆವರಣ

Last Updated 28 ಅಕ್ಟೋಬರ್ 2017, 6:39 IST
ಅಕ್ಷರ ಗಾತ್ರ

ಮುಂಡರಗಿ: ‘ಭಾರಿ ಮಳೆಯಾಗಿದ್ದರಿಂದ ತಾಲ್ಲೂಕಿನ ಕೊರ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆ ಹಾಗೂ ಎಂ.ಸಿ.ಎಸ್. ಶಾಲೆ ಆವರಣ ಕೆಸರು ಗದ್ದೆಯಂತಾಗಿದೆ. ಶಾಲಾ ಆವರಣದಲ್ಲಿ ಮಣ್ಣು ಹಾಕಿಸಿ, ನೀರು ಇಂಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಎ.ಪಿ.ಎಂ.ಸಿ ಸದಸ್ಯ ರವೀಂದ್ರ ಉಪ್ಪಿನಬೆಟಗೇರಿ ಒತ್ತಾಯಿಸಿದರು.

‘ಮುಂಡರಗಿ–ಹೂವಿನಹಡಗಲಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡ ನಂತರ ರಸ್ತೆಯ ಬದಿಯಲ್ಲಿ ಸಂಗ್ರಹವಾಗುತ್ತಿದ್ದ ಮಳೆ ನೀರೆಲ್ಲ ಶಾಲಾ ಆವರಣದಲ್ಲಿ ಸಂಗ್ರಹವಾಗುತ್ತಿದೆ’ ಎಂದು ಅವರು ದೂರಿದರು.

‘ಕೊರ್ಲಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಗಲೀಜು ನೀರು ನಿಲ್ಲುತ್ತಿದೆ. ಇದರಿಂದ ಮಕ್ಕಳ ಆಟೋಟಕ್ಕೆ ಹಾಗೂ ದೈನಂದಿನ ಶಾಲಾ ಚಟುವಟಿಕೆಗಳಿಗೆ ತೊಂದರೆ ಆಗುತ್ತಿದೆ. ಅಲ್ಲದೇ, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಇದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT