ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಸಿ ರಸ್ತೆ ಕಾಮಗಾರಿ ಪರಿಶೀಲನೆ

Last Updated 28 ಅಕ್ಟೋಬರ್ 2017, 10:04 IST
ಅಕ್ಷರ ಗಾತ್ರ

ಕೆಂಭಾವಿ: ಲೋಕೋಪಯೋಗಿ ಇಲಾಖೆಯ ನಿವೃತ್ತ ಎಂಜಿನಿಯರ್ ನಾಗರಾಜ ನೇತೃತ್ವದ ಗುಣ ನಿಯಂತ್ರಣ ನಾಲ್ಕನೇ ಪರಿಶೀಲನಾ ತಂಡ ಬುಧವಾರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿತು.

ಎಸ್.ಎಫ್.ಸಿ ಹಾಗೂ 14ನೇ ಹಣಕಾಸು ಯೋಜನೆ ಅಡಿಯಲ್ಲಿ ಪಟ್ಟಣದಲ್ಲಿ ನಿರ್ಮಾಣವಾದ ಸಿ.ಸಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ವೀಕ್ಷಣೆ ಮಾಡಿತು.

ಹಲವು ವಾರ್ಡ್‌ ಗಳಲ್ಲಿ ಸಿ.ಸಿ ರಸ್ತೆ ಸರ್ಕಾರದ ನಿಯಮದ ಪ್ರಕಾರ ಅಂದಾಜು ಪತ್ರಿಕೆಯಲ್ಲಿ ತೋರಿಸಿದ ಕಾಮಗಾರಿ ಅಳತೆ ಪ್ರಮಾಣದಲ್ಲಿ ನಡೆದಿಲ್ಲ ಎಂದು ತಂಡದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ‘ಈ ಬಗ್ಗೆ ಸರ್ಕಾರಕ್ಕೆ ವರದಿ ನೀಡಿ ಸಂಬಂಧಿಸಿದ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಲಾಗುವುದು’ ಎಂದು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಮಲ್ಲಿಕಾರ್ಜುನ ಹಾಗೂ ಬಂಡೆಪ್ಪ ತಂಡದ ಜೊತೆಗಿದ್ದರು. ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ಮುಖ್ಯಾಧಿಕಾರಿ ಚಂದ್ರಶೇಖರ ಮೇಟಿ, ಪುರಸಭೆ ಸದಸ್ಯರಾದ ರಾಘವೇಂದ್ರ ದೇಶಪಾಂಡೆ, ಮಹಿಪಾಲರೆಡ್ಡಿ ಡಿಗ್ಗಾವಿ, ಮಲ್ಲಿನಾಥಗೌಡ ಪೊಲೀಸ್ ಪಾಟೀಲ, ಗುರು ಕುಂಬಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT