ಶನಿವಾರ, ಸೆಪ್ಟೆಂಬರ್ 21, 2019
24 °C

ಅಂಗಡಿಯಲ್ಲಿ ಮದ್ಯ ಮಾರಾಟ: ಬಂಧನ

Published:
Updated:

ಶಹಾಪುರ: ತಾಲ್ಲೂಕಿನ ನಾಯ್ಕಲ್ ಗ್ರಾಮದ ಬೀಡಾ ಅಂಗಡಿಯಲ್ಲಿ ಗುರುವಾರ ತಡರಾತ್ರಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಭಾಗಪ್ಪ ನಾಯ್ಕಲ್ ಬಂಧಿತ ವ್ಯಕ್ತಿ. ಬೀಡಾ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ವಡಿಗೇರಾ ಠಾಣೆಯ ಪೊಲೀಸರು ದಾಳಿ ನಡೆಸಿ ₹10 ಸಾವಿರ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ವಡಿಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Post Comments (+)