ಸೋನಿಯಾ ಗಾಂಧಿ ಗುಣಮುಖ: ಆಸ್ಪತ್ರೆಯಿಂದ ಮನೆಗೆ

ಗುರುವಾರ , ಜೂನ್ 27, 2019
23 °C

ಸೋನಿಯಾ ಗಾಂಧಿ ಗುಣಮುಖ: ಆಸ್ಪತ್ರೆಯಿಂದ ಮನೆಗೆ

Published:
Updated:
ಸೋನಿಯಾ ಗಾಂಧಿ ಗುಣಮುಖ: ಆಸ್ಪತ್ರೆಯಿಂದ ಮನೆಗೆ

ನವದೆಹಲಿ: ಅನಾರೋಗ್ಯದ ಕಾರಣ ದೆಹಲಿಯ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದಾರೆ.

ಸೋನಿಯಾ ಗಾಂಧಿ ಅವರು ಹೊಟ್ಟೆ ನೋವಿನಿಂದ ಚೇತರಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಗುಣಮುಖರಾಗಿರುವ ಸೋನಿಯಾ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸೋನಿಯಾ ಗಾಂಧಿ ಅವರು ಶುಕ್ರವಾರ ಅನಾರೋಗ್ಯದ ಕಾರಣ ಶಿಮ್ಲಾದಿಂದ ದೆಹಲಿಗೆ ಹಿಂತಿರುಗಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.

‘ಸಂಜೆ ಐದು ಗಂಟೆ ವೇಳೆಗೆ ಸೋನಿಯಾ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಅವರು ಹೊಟ್ಟೆಯ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಹಿರಿಯ ಅಧಿಕಾರಿ ಡಾ. ಡಿ.ಎಸ್‌. ರಾಣಾ ತಿಳಿಸಿದ್ದರು.

ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ನವೆಂಬರ್ 9ಕ್ಕೆ ಚುನಾವಣೆ ನಡೆಯಲಿದೆ. ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸೋನಿಯಾ ಕೂಡ ಒಬ್ಬರು. ಆದ್ದರಿಂದ, ಅವರು ಶಿಮ್ಲಾಕ್ಕೆ ತೆರಳಿದ್ದರು. ಈ ವೇಳೆ ಅನಾರೋಗ್ಯಕ್ಕೀಡಾಗಿದ್ದರಿಂದ ಅವರು ದೆಹಲಿಗೆ ಹಿಂದಿರುಗಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry