ಸ್ವಚ್ಛ ಭಾರತ ಅಭಿಯಾನದಲ್ಲಿ ಮಾಧ್ಯಮಗಳ ಪಾತ್ರ ಶ್ಲಾಘನೀಯ: ನರೇಂದ್ರ ಮೋದಿ

ಶುಕ್ರವಾರ, ಮೇ 24, 2019
26 °C

ಸ್ವಚ್ಛ ಭಾರತ ಅಭಿಯಾನದಲ್ಲಿ ಮಾಧ್ಯಮಗಳ ಪಾತ್ರ ಶ್ಲಾಘನೀಯ: ನರೇಂದ್ರ ಮೋದಿ

Published:
Updated:
ಸ್ವಚ್ಛ ಭಾರತ ಅಭಿಯಾನದಲ್ಲಿ ಮಾಧ್ಯಮಗಳ ಪಾತ್ರ ಶ್ಲಾಘನೀಯ: ನರೇಂದ್ರ ಮೋದಿ

ನವದೆಹಲಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಸ್ವಚ್ಛ ಭಾರತ ಅಭಿಯಾನ ದೇಶದಲ್ಲಿ ಯಶಸ್ವಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರು ಶನಿವಾರ ಆಯೋಜಿಸಿದ್ದ ದೀಪಾವಳಿ ಮಿಲನ ಕಾರ್ಯಕ್ರಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

‘ಎನ್‌ಡಿಎ ನೇತೃತ್ವ ಕೇಂದ್ರ ಸರ್ಕಾರ ದೇಶದ ಗಡಿ ಭದ್ರತೆ, ಬಡವರ ಜೀವನ ಸುಧಾರಣೆ ಸೇರಿದಂತೆ ಎಲ್ಲ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿದೆ’ ಎಂದು ಅಮಿತ್‌ ಷಾ ಹೇಳಿದರು.

ಇದೇ ಸಂದರ್ಭದಲ್ಲಿ ಸ್ವಚ್ಛ ಭಾರತ ಅಭಿಯಾನ ಕುರಿತು ದೇಶದ ಜನರಲ್ಲಿ ಸಕಾರಾತ್ಮಕ ಬದಲಾವಣೆ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಮಾಧ್ಯಮಗಳಿಗೆ ನರೇಂದ್ರ ಮೋದಿ ಅವರು ಧನ್ಯವಾದ ತಿಳಿದರು. 

‘ಬಹಳ ದಿನಗಳ ನಂತರ ಪತ್ರಕರ್ತ ಮಿತ್ರರನ್ನು ಕ್ಯಾಮೆರಾ, ಪೇಪರ್‌, ಪೆನ್ನು ಇಲ್ಲದೆ ಭೇಟಿ ಮಾಡುತ್ತಿರುವುದು ನನಗೆ ಸಂತಸ ತರಿಸಿದೆ. ಎಲ್ಲರೂ ತಮ್ಮ ಕೆಲಸವನ್ನು ಅರ್ಥಮಾಡಿಕೊಂಡು ದೇಶದ ಪ್ರಗತಿಗಾಗಿ ದುಡಿಯಬೇಕು’ ಎಂದು ಮೋದಿ ಹೇಳಿದರು.

ಕೆಲ ವರ್ಷಗಳ ಹಿಂದೆ ಮಾಧ್ಯಮ ಕ್ಷೇತ್ರದಲ್ಲಿ ಕೆಲವೆ ಕೆಲವು ಮಂದಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಈಗ ಮಾಧ್ಯಮ ಕೇತ್ರದಲ್ಲಿ ಬದಲಾವಣೆಗಳಾಗಿದ್ದು, ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ. ಕಾಲ ಬದಲಾಗಿದೆ. ಹಾಗಾಗಿ, ಈಗ ಮಾಧ್ಯಮಗಳ ಜತೆ ಸಂವಹನ ನಡೆಸುವುದು ಕಷ್ಟವಾಗಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry