ಭಾರತ ಮೂಲದ ಮಲೇಷ್ಯಾ ಕುಟುಂಬಕ್ಕೆ ಸುಷ್ಮಾ ಸ್ವರಾಜ್‌ ನೆರವು

ಬುಧವಾರ, ಮೇ 22, 2019
24 °C

ಭಾರತ ಮೂಲದ ಮಲೇಷ್ಯಾ ಕುಟುಂಬಕ್ಕೆ ಸುಷ್ಮಾ ಸ್ವರಾಜ್‌ ನೆರವು

Published:
Updated:
ಭಾರತ ಮೂಲದ ಮಲೇಷ್ಯಾ ಕುಟುಂಬಕ್ಕೆ ಸುಷ್ಮಾ ಸ್ವರಾಜ್‌ ನೆರವು

ನವದೆಹಲಿ: ನಮ್ಮ ಕುಟುಂಬ ಸದಸ್ಯರು ಪಾಸ್‌ಪೋರ್ಟ್‌ ಕಳೆದುಕೊಂಡು ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾರಾಂತ್ಯದಲ್ಲಿ ಪಾಸ್‌ಪೋರ್ಟ್‌ ಕಚೇರಿಗೆ ರಜೆ ಇರುವ ಕಾರಣ ಅಧಿಕಾರಿಗಳನ್ನು ಸಂಪರ್ಕಿಸಲು ಕಷ್ಟವಾಗಿದ್ದು, ಸಹಾಯ ಮಾಡುವಂತೆ ಮೀರಾ ರಮೇಶ್‌ ಪಟೇಲ್‌ ಟ್ವಿಟರ್‌ನಲ್ಲಿ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಮನವಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸುಷ್ಮಾ ಸ್ವರಾಜ್‌, ‘ಇದೊಂದು ತುರ್ತು ಪ್ರಕರಣವಾಗಿದೆ. ಈ ಕೂಡಲೆ ನೆರವಿಗೆ ಧಾವಿಸುವಂತೆ ಮಲೇಷ್ಯಾದಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗೆ ತಿಳಿಸಿದ್ದು, ಸಮಸ್ಯೆ ಬಗೆಹರಿಸಲಾಗುವದು’ ಎಂದು ಟ್ವೀಟ್‌ ಮಾಡಿದ್ದಾರೆ. 

ಮತ್ತೊಂದು ಪ್ರಕರಣದಲ್ಲಿ, ಅಮೆರಿಕದಲ್ಲಿ ವಿಧ್ಯಾಭ್ಯಾಸ ಮಾಡಿರುವ ಅನುಷಾ ದುಲಿಪಾಲಾ ಅವರು ತಮ್ಮ ಪಾಸ್‌ಪೋರ್ಟ್‌ ಕಳೆದುಕೊಂಡಿದ್ದು, ಬೇರೆ ಕಡೆ ಪ್ರಯಾಣಿಸಲು ತೊಂದರೆಯಾಗುತ್ತಿದೆ. ಆದ ಕಾರಣ ಸಹಾಯ ಮಾಡುವಂತೆ ಟ್ವಿಟರ್‌ನಲ್ಲಿ ಸುಷ್ಮಾ ಸ್ವರಾಜ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry