ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ ಕಬಡ್ಡಿ: ಪಟ್ನಾ ಮುಡಿಗೆ ಹ್ಯಾಟ್ರಿಕ್‌ ಪ್ರಶಸ್ತಿ ಗರಿ

Last Updated 28 ಅಕ್ಟೋಬರ್ 2017, 16:15 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‌ನ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಪಟ್ನಾ ಪೈರೆಟ್ಸ್‌ ತಂಡ ಗುಜರಾತ್ ಫಾರ್ಚೂನ್‌ಜೈಂಟ್ಸ್ ಎದುರು 55–38 ಪಾಯಿಂಟ್ಸ್‌ ಅಂತರದ ಜಯ ಸಾಧಿಸಿದೆ.

ಇದರೊಂದಿಗೆ ಪ್ರೊ ಕಬಡ್ಡಿ ಲೀಗ್‌ನಲ್ಲಿ ಮೂರು ಬಾರಿ ಚಾಂಪಿಯನ್‌ ಆದ ಮತ್ತು ಹ್ಯಾಟ್ರಿಕ್‌ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಶ್ರೇಯಕ್ಕೆ ಪ್ರದೀಪ್ ನರ್ವಾಲ್ ಬಳಗ ಪಾತ್ರವಾಗಿದೆ.

ಇದೇ ಮೊದಲ ಬಾರಿಗೆ ಲೀಗ್‌ಗೆ ಪ್ರವೇಶ ಪಡೆದಿದ್ದ ಗುಜರಾತ್ ಫಾರ್ಚೂನ್‌ಜೈಂಟ್ಸ್ ತಂಡ ಅಮೋಘ ಪ್ರದರ್ಶನದ ಮೂಲಕ ಅಂತಿಮ ಘಟ್ಟ ತಲುಪಿತ್ತು. ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿದ್ದ ಜೈಂಟ್ಸ್‌ ಸಹಜವಾಗಿಯೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿತ್ತು. ಆದರೆ, ಚೊಚ್ಚಲ ಪ್ರಶಸ್ತಿ ಗೆಲ್ಲುವ ಈ ತಂಡದ ಕನಸಿಗೆ ಪಟ್ನಾ ಪೈರೆಟ್ಸ್ ಅಡ್ಡಿಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT