ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ ಲಾಭ ಹೆಚ್ಚಳ

Last Updated 28 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಕಾರ್‌ ತಯಾರಿಕೆಯ ದೇಶದ ಅತಿದೊಡ್ಡ ಸಂಸ್ಥೆ ಮಾರುತಿ ಸುಜುಕಿ, ದ್ವಿತೀಯ ತ್ರೈಮಾಸಿಕದಲ್ಲಿ ₹ 2,484 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 2,401 ಕೋಟಿಗೆ ಹೋಲಿಸಿದರೆ ಈ ಬಾರಿ ಶೇ 3.4ರಷ್ಟು ಹೆಚ್ಚಳವಾಗಿದೆ. ಈ ಅವಧಿಯಲ್ಲಿ ನಿವ್ವಳ ಮಾರಾಟವು ಶೇ 22ರಷ್ಟು ಹೆಚ್ಚಾಗಿ ₹ 21,438 ಕೋಟಿಗಳಿಗೆ ತಲುಪಿದೆ.

ಜುಲೈ– ಸೆಪ್ಟೆಂಬರ್‌ ಅವಧಿಯಲ್ಲಿ ಸಂಸ್ಥೆಯು 4.92 ಲಕ್ಷ ವಾಹನಗಳನ್ನು ಮಾರಾಟ ಮಾಡಿದೆ. ಇದರಲ್ಲಿ ರಫ್ತು ಮಾಡಿದ 34,717 ವಾಹನಗಳೂ ಸೇರಿವೆ. ಶುಕ್ರವಾರದ ವಹಿವಾಟಿನಲ್ಲಿ ಸಂಸ್ಥೆಯ ಷೇರು ಬೆಲೆ ₹ 8,171.45ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT