1.87 ಲಕ್ಷ ಹೊಸ ಮತದಾರರ ಸೇರ್ಪಡೆ

ಭಾನುವಾರ, ಮೇ 26, 2019
28 °C
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮತದಾರರ ಪಟ್ಟಿ ಪರಿಷ್ಕರಣೆ

1.87 ಲಕ್ಷ ಹೊಸ ಮತದಾರರ ಸೇರ್ಪಡೆ

Published:
Updated:
1.87 ಲಕ್ಷ ಹೊಸ ಮತದಾರರ ಸೇರ್ಪಡೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ 1,87,015 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. 88,308 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಒಟ್ಟು 84,97,192 ಮತದಾರರಿದ್ದಾರೆ.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ‘ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಇದೇ 30ರಂದು ಅಂತಿಮ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸುತ್ತೇವೆ. ಆಕ್ಷೇಪಣೆಗೆ ನ. 30ರವರೆಗೆ ಅವಕಾಶವಿದೆ. ಜ.12ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸುತ್ತೇವೆ’ ಎಂದರು.

ಹೆಸರು ಸೇರ್ಪಡೆಗೆ ಅವಕಾಶ: ‘ವಿಶೇಷ ಆಂದೋಲನದಡಿ ನವೆಂಬರ್‌ 15ರಿಂದ 30ರವರೆಗೆ ಬಿಎಲ್‌ಒ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರರ ಹೆಸರನ್ನು ಪಟ್ಟಿಗೆ ಸೇರ್ಪಡೆ ಮಾಡಲಿದ್ದಾರೆ. ಇದೇ ವೇಳೆ ಯುವ ಮತದಾರರು ಪಟ್ಟಿಗೆ ಹೆಸರು ನೋಂದಾಯಿಸಬಹುದು. ಬೇರೆ ಕಡೆಯಿಂದ ಬಂದು ನಗರದಲ್ಲಿ ನೆಲೆಸಿರುವವರೂ ಹೊಸದಾಗಿ ಸೇರ್ಪಡೆ ಆಗಬಹುದು.  ಮತದಾರರ ಪಟ್ಟಿಯಿಂದ ಹೆಸರು ತೆಗೆಸುವುದಕ್ಕೆ ಹಾಗೂ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. www.ceokarnataka.kar.nic.in ಮೂಲಕವೂ ಹೆಸರು ನೋಂದಾಯಿಸಬಹುದು’ ಎಂದರು.

‘ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಪ್ರತ್ಯೇಕ ನಮೂನೆಗಳಿವೆ. ನಮೂನೆ–6,7,8ಹಾಗೂ 8ಎ ಅರ್ಜಿಯನ್ನು ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ಪಾಲಿಕೆಯ ವಾರ್ಡ್‌ ಕಚೇರಿ, ಬೆಂಗಳೂರು ಒನ್‌ ಕೇಂದ್ರಗಳು, ಸಕಾಲ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು’ ಎಂದು ಹೇಳಿದರು.

‘ನಗರದ ಒಟ್ಟು ಜನಸಂಖ್ಯೆ ಮತ್ತು ಮತದಾರರ ಅನುಪಾತ ಶೇ 67.5ರಷ್ಟಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry