ಕಾರ್ಯಕರ್ತರ ಜೊತೆ ಎಚ್‌ಡಿಕೆ ವಾಟ್ಸ್ ಆ್ಯಪ್‌ ಲಿಂಕ್‌

ಸೋಮವಾರ, ಜೂನ್ 17, 2019
22 °C

ಕಾರ್ಯಕರ್ತರ ಜೊತೆ ಎಚ್‌ಡಿಕೆ ವಾಟ್ಸ್ ಆ್ಯಪ್‌ ಲಿಂಕ್‌

Published:
Updated:
ಕಾರ್ಯಕರ್ತರ ಜೊತೆ ಎಚ್‌ಡಿಕೆ ವಾಟ್ಸ್ ಆ್ಯಪ್‌ ಲಿಂಕ್‌

ಬೆಂಗಳೂರು:‌ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ, ಪಕ್ಷದ ವಿಚಾರಗಳನ್ನು ವಾಟ್ಸ್‌ಆ್ಯಪ್‌ ಮೂಲಕ ಕಾರ್ಯಕರ್ತರಿಗೆ ನೇರವಾಗಿ ತಲುಪಿಸಲು ನಿರ್ಧರಿಸಿದ್ದಾರೆ.

ಈ ಉದ್ದೇಶದಿಂದ ಸಾಮಾಜಿಕ ಜಾಲ ತಾಣದಲ್ಲಿ ಈಗಾಗಲೇ ಹೊಸ ಖಾತೆ ತೆರೆದಿರುವ ಅವರು, ಪಕ್ಷದ ಕಾರ್ಯಕರ್ತರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮತ್ತು ವಿಧಾನಸಭಾ ಕ್ಷೇತ್ರವನ್ನು ಇದಕ್ಕೆ ಸಂಬಂಧಿಸಿದ ಲಿಂಕ್‌ನಲ್ಲಿ ನಮೂದಿಸುವಂತೆ ಮನವಿ ಮಾಡಿದ್ದಾರೆ.

‘ಮೊದಲ ದಿನ‌ 50 ಸಾವಿರ ಹಾಗೂ ಎರಡನೇ ದಿನ 30 ಸಾವಿರಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಲಿಂಕ್‌ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದು, ಏಕಕಾಲದಲ್ಲಿ ಕನಿಷ್ಠ 15 ಲಕ್ಷ ಜನರಿಗೆ ಪಕ್ಷದ ಮಾಹಿತಿ ರವಾನಿಸಲು ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಜೆಡಿಎಸ್‌ ಪಕ್ಷದ ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry