ಟಿಪ್ಪು ಜಯಂತಿಗೆ ವಿರೋಧ: ಆಕ್ರೋಶ

ಭಾನುವಾರ, ಮೇ 26, 2019
32 °C

ಟಿಪ್ಪು ಜಯಂತಿಗೆ ವಿರೋಧ: ಆಕ್ರೋಶ

Published:
Updated:
ಟಿಪ್ಪು ಜಯಂತಿಗೆ ವಿರೋಧ: ಆಕ್ರೋಶ

ಕಲಬುರ್ಗಿ: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ, ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ ಹಾಗೂ ಶೋಭಾ ಕರಂದ್ಲಾಜೆ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಟಿಪ್ಪುವಿನ ವೇಷಭೂಷಣ ಧರಿಸಿ ಹಾಡಿಹೊಗಳಿದ್ದಾರೆ. ಆದರೆ ಈಗ ಕಾಂಗ್ರೆಸ್ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ.

ಈ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಈರಣ್ಣ ಪಾಟೀಲ ಝಳಕಿ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry