ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

68 ಭಾರತೀಯ ಮೀನುಗಾರರ ಬಿಡುಗಡೆ

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಕರಾಚಿ: ಗಡಿ ಪ್ರದೇಶ ಉಲ್ಲಂಘಿಸಿದ ಆರೋಪಕ್ಕಾಗಿ ಬಂಧಿಸಲಾಗಿದ್ದ 68  ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಶನಿವಾರ ಬಿಡುಗಡೆ ಮಾಡಿದೆ.

ಕರಾಚಿಯ ಜೈಲಿನಲ್ಲಿ ಇರಿಸಲಾಗಿದ್ದ ಇವರನ್ನು ಲಾಹೋರ್‌ಗೆ ರೈಲಿನಲ್ಲಿ ಕರೆದೊಯ್ಯಲಾಯಿತು. ಬಳಿಕ ವಾಘಾ ಗಡಿಗೆ ಬರಲಿದ್ದು, ಅಲ್ಲಿ ಮೀನುಗಾರರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ.

ಜುಲೈ ತಿಂಗಳಲ್ಲಿ 78 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲಾಗಿತ್ತು. ಕರಾಚಿಯ ಲಾಂಧಿ ಜೈಲಿನಲ್ಲಿ ಇನ್ನೂ 200 ಭಾರತೀಯ ಮೀನುಗಾರರಿದ್ದಾರೆ. ಕಳೆದ ವರ್ಷ ಡಿಸೆಂಬರ್‌ ಮತ್ತು ಈ ವರ್ಷದ ಜನವರಿಯಲ್ಲಿ ಭಾರತದ ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT