ಸಚಿವರ ಬೆಂಗಾವಲು ವಾಹನ ಡಿಕ್ಕಿ: ಬಾಲಕ ಸಾವು

ಭಾನುವಾರ, ಜೂನ್ 16, 2019
22 °C

ಸಚಿವರ ಬೆಂಗಾವಲು ವಾಹನ ಡಿಕ್ಕಿ: ಬಾಲಕ ಸಾವು

Published:
Updated:

ಲಖನೌ: ಸಚಿವರ ಬೆಂಗಾವಲು ಪಡೆಯ ವಾಹನ ಡಿಕ್ಕಿ ಹೊಡೆದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಲಕನ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

‘ಗೊಂಡಾ ಜಿಲ್ಲೆಯ ಕರ್ನಲ್‌ಗಂಜ್ ಪ್ರದೇಶದಲ್ಲಿ ಸಚಿವ ಓಂಪ್ರಕಾಶ್‌ ರಾಜಭರ್‌ ಅವರ ಬೆಂಗಾವಲು ವಾಹನಗಳು ಹಾದುಹೋಗುತ್ತಿದ್ದವು. ಒಂದು ವಾಹನ ತಗುಲಿ ಬಾಲಕ ನೆಲಕ್ಕುರುಳಿದ. ನಂತರ ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದ’ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕರಿಂದ ವಿವರವಾದ ವರದಿ ಕೇಳಿರುವ ಮುಖ್ಯಮಂತ್ರಿ, ಅಪಘಾತಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

‘ಅಪಘಾತ ನಡೆದ ಸಂದರ್ಭದಲ್ಲಿ ತಾವು ಬೆಂಗಾವಲು ವಾಹನಗಳೊಂದಿಗೆ ತೆರಳುತ್ತಿರಲಿಲ್ಲ. ಆಗ ನಾನು ಘಟನಾ ಸ್ಥಳದಿಂದ 25 ಕಿಲೋ ಮೀಟರ್‌ ದೂರದಲ್ಲಿದ್ದೆ’ ಎಂದು ಓಂ ಪ್ರಕಾಶ್‌ ತಿಳಿಸಿದ್ದಾರೆ.

ಕಾರು ಡಿಕ್ಕಿ ಹೊಡೆದರೂ ಬೆಂಗಾವಲು ವಾಹನದಲ್ಲಿದ್ದವರು ಬಾಲಕನಿಗೆ ನೆರವು ನೀಡಲು  ಯಾರೂ ಮುಂದಾಗಲಲಿಲ್ಲ ಎಂದು ಬಾಲಕನ ಕುಟುಂಬದ ಸದಸ್ಯರು ದೂರಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry