ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಮುಖಂಡರ ರಾಜ್ಯ ಪ್ರವಾಸ

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ರಚಿಸಿರುವ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯ ವಿವಿಧ ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಜನಾಭಿಪ್ರಾಯ ಆಲಿಸಲಿವೆ.

ಸಂಸದ ಎಂ. ವೀರಪ್ಪ ಮೊಯಿಲಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪ್ರಣಾಳಿಕೆ ಸಮಿತಿ ಸಭೆ ಭಾನುವಾರ ನಡೆಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ, ದಿನೇಶ್ ಗುಂಡೂರಾವ್‌, ಸಚಿವರಾದ ಎಚ್.ಕೆ. ಪಾಟೀಲ, ಡಿ.ಕೆ. ಶಿವಕುಮಾರ್, ಮಾರ್ಗರೇಟ್ ಆಳ್ವ ಸಭೆಯಲ್ಲಿ ಪಾಲ್ಗೊಂಡಿದ್ದರು.‌ ಐದು ತಂಡಗಳನ್ನು ರಚಿಸಲು ಸಭೆ ನಿರ್ಧರಿಸಿದೆ.

ನವೆಂಬರ್‌ ತಿಂಗಳಿನಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ಪಕ್ಷದ ನಾಯಕರು, ಪದಾಧಿಕಾರಿಗಳು, ಪ್ರಗತಿ
ಪರರು, ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರನ್ನು ಭೇಟಿ ಮಾಡಿ ಅವರ ಅಪೇಕ್ಷೆಗಳನ್ನು ಆಲಿಸಲಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರ ಜತೆ ಸಮಾಲೋಚನೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT