ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟದ ಕ್ರಾಸ್ ಕಂಟ್ರಿ ಇಂದು

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಳಗಾವಿ: ಭಾರತ ಅಥ್ಲೆಟಿಕ್‌ ಫೆಡರೇಷನ್‌ ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಜಂಟಿಯಾಗಿ ಇದೇ 30ರಂದು ಅಖಿಲ ಭಾರತ ಅಂತರ ವಿಶ್ವವಿದ್ಯಾಲಗಳ ಪುರುಷರ ಮತ್ತು ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಷಿಪ್ ಆಯೋಜಿಸಿದೆ.

‘ಈ ಚಾಂಪಿಯನ್‌ಷಿಪ್‌ ಬೆಳಗಾವಿಯಲ್ಲಿ ನಡೆಯುತ್ತಿರುವುದು ಮೊದಲು. ದೇಶದ 169 ವಿಶ್ವವಿದ್ಯಾಲಯಗಳಿಂದ ಸುಮಾರು 1,800 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 6.30ಕ್ಕೆ ಮಹಿಳೆಯರ, 7.45ಕ್ಕೆ ಪುರುಷರ ವಿಭಾಗದ ಸ್ಪರ್ಧೆಗಳು ಆರಂಭಗೊಳ್ಳಲಿವೆ’ ಎಂದು ಕುಲಪತಿ ಪ್ರೊ. ಕರಿಸಿದ್ದಪ್ಪ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

‘ಸ್ಪರ್ಧೆಗಳ ನಿಖರವಾದ ಫಲಿತಾಂಶ ಪಡೆಯಲು ಸೆನ್ಸಾರ್ ಆಧಾರಿತ ತಂತ್ರಜ್ಙಾನ ಬಳಸಿಕೊಳ್ಳಲಾಗುತ್ತಿದೆ. ವೈಯಕ್ತಿಕ ಓಟದ ವಿಭಾಗದಲ್ಲಿ ಮೊದಲ 6 ಸ್ಥಾನಗಳನ್ನು ಪಡೆದ ಕ್ರೀಡಾಪಟುಗಳಿಗೆ ಬಹುಮಾನ ನೀಡಲಾಗುವುದು. ತಂಡಗಳ ವಿಭಾಗದಲ್ಲಿ ಮೊದಲ ಮೂರು ಸ್ಥಾನ ಪಡೆದ ತಂಡಗಳಿಗೆ ಬಹುಮಾನ ಕೊಡಲಾಗುವುದು’ ಎಂದು ಅವರು ಹೇಳಿದರು.

ದೆಹಲಿ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ರಾಕೇಶ ಗುಪ್ತಾ ವೀಕ್ಷಕರಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT