ರಾಹುಲ್ ಗಾಂಧಿ ರಾಜ್ಯ ಭೇಟಿ ನ. 21, 22 ಕ್ಕೆ?

ಬುಧವಾರ, ಜೂನ್ 19, 2019
25 °C

ರಾಹುಲ್ ಗಾಂಧಿ ರಾಜ್ಯ ಭೇಟಿ ನ. 21, 22 ಕ್ಕೆ?

Published:
Updated:

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರಾಹುಲ್ ಗಾಂಧಿ ನವೆಂಬರ್ 21 ಹಾಗೂ 22 ರಂದು ರಾಜ್ಯಕ್ಕೆ ಭೇಟಿ ನೀಡುವ ಸಂಭವ ಇದೆ.

ನ.19ರಂದು ಚಿಕ್ಕಮಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಇಂದಿರಾಗಾಂಧಿ ಜನ್ಮ ಶತಮಾನೋತ್ಸವದಲ್ಲಿ ರಾಹುಲ್‌ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಂದು ದೆಹಲಿಯಲ್ಲೇ ಉಳಿಯಬೇಕಾದ ಅನಿವಾರ್ಯತೆ ಇದ್ದುದರಿಂದ ರಾಹುಲ್ ಕಾರ್ಯಕ್ರಮ ರದ್ದಾಗಿತ್ತು.

‘ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರಿಗೆ ಭಾನುವಾರ ಕರೆ ಮಾಡಿದ ರಾಹುಲ್‌ ಗಾಂಧಿ, 21 ಮತ್ತು 22ರಂದು ರಾಜ್ಯಕ್ಕೆ ಭೇಟಿ ನೀಡಲು ಸಿದ್ಧ. ಕಾರ್ಯಕ್ರಮ ಮರು ಹೊಂದಾಣಿಕೆ ಮಾಡಬಹುದೇ ಎಂಬ ಬಗ್ಗೆ ತಿಳಿಸಿ ಎಂದು ಸೂಚಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ‘ಕೆಪಿಸಿಸಿ ಅಧ್ಯಕ್ಷರಾಗಿ ಏಳು ವರ್ಷ ಪೂರೈಸಿರುವ ಪರಮೇಶ್ವರಗೆ ಅಭಿನಂದನೆ ಹೇಳಿದ ರಾಹುಲ್‌, ನಿಮ್ಮ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರ ತರಲು ಶ್ರಮಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದರು’ ಎಂದು ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry