ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಪುತ್ರನ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸಿಂಧ್ಯ ಸ್ಪರ್ಧೆ?

ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್‌ಗೆ ಮರು ಸೇರ್ಪಡೆ ಇಂದು
Last Updated 29 ಅಕ್ಟೋಬರ್ 2017, 19:50 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.

ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್‌ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ವರುಣಾದಲ್ಲಿ ಒಕ್ಕಲಿಗರು, ಲಿಂಗಾಯಿತರು ಮತ್ತು ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚು. ಈ ಲೆಕ್ಕಾಚಾರದಲ್ಲಿ ಸಿಂಧ್ಯ ಅವರನ್ನು ಕಣಕ್ಕೆ ಇಳಿಸಿ, ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲೇ ಕಟ್ಟಿ ಹಾಕುವ ಚಿಂತನೆ ಜೆಡಿಎಸ್‌ ವರಿಷ್ಠರದ್ದಾಗಿದೆ.

ಭಾನುವಾರ ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿಂಧ್ಯ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

ಮಾತುಕತೆ ವೇಳೆ ವರುಣಾದಿಂದ ಸ್ಪರ್ಧಿಸುವ ಬಗ್ಗೆ ಪ್ರಾಸಂಗಿಕವಾಗಿ ಚರ್ಚೆ ನಡೆಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT