ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಸರಣಿ ಜಯ

ವೇಗದ ಓಂಬತ್ತು ಸಾವಿರ ರನ್ ಗಳಿಕೆ ದಾಖಲೆ ಬರೆದ ವಿರಾಟ್ ಕೊಹ್ಲಿ
Last Updated 29 ಅಕ್ಟೋಬರ್ 2017, 20:25 IST
ಅಕ್ಷರ ಗಾತ್ರ

ಕಾನ್ಪುರ: ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು ಭಾನುವಾರ ನ್ಯೂಜಿಲೆಂಡ್ ಎದುರಿನ ಏಕದಿನ ಕ್ರಿಕೆಟ್ ಸರಣಿಯನ್ನು 2–1ರಿಂದ ಜಯಿಸಿತು.

ಗ್ರೀನ್‌ ಪಾರ್ಕ್‌ ಅಂಗಳದಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ(147; 138ಎ, 18ಬೌಂ, 2 ಸಿ)  ಮತ್ತು ವಿರಾಟ್‌ ಕೊಹ್ಲಿ (113; 106ಎ, 9ಬೌಂ, 1ಸಿ) ಅವರ ಶತಕಗಳ ನೆರವಿನಿಂದ ಭಾರತ ತಂಡವು 6 ರನ್‌ಗಳ ರೋಚಕ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 50 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 337 ರನ್‌ ಗಳಿಸಿತು. ನಂತರ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ದಿಟ್ಟ ಹೋರಾಟ ನಡೆಸಿತು. 50 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 331 ರನ್‌ಗಳನ್ನು ಗಳಿಸಿತು.

ವಿರಾಟ್ ವಿಶ್ವದಾಖಲೆ
ಇದೇ ಸಂದರ್ಭದಲ್ಲಿ ವಿರಾಟ್ ಅವರು ಏಕದಿನ ಮಾದರಿಯಲ್ಲಿ ವೇಗವಾಗಿ 9,000ರನ್‌ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು. 194 ಇನಿಂಗ್ಸ್‌ಗಳಲ್ಲಿ ಅವರು ಈ ಸಾಧನೆ ಮಾಡಿದರು. 205 ಇನಿಂಗ್ಸ್‌ಗಳಲ್ಲಿ ಈ ದಾಖಲೆ ಬರೆದಿದ್ದ ದಕ್ಷಿಣ ಆಫ್ರಿಕಾದ ಎ.ಬಿ. ಡಿವಿಲಿಯರ್ಸ್ ಅವರನ್ನು ಹಿಂದಿಕ್ಕಿದರು. ಈ ಸಾಧನೆ ಮಾಡಿದ ಭಾರತದ ಆರನೇ ಆಟಗಾರರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT