ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಲ್ಯಾಪ್‌ಟಾಪ್ ವಿತರಣೆ ನ.18ಕ್ಕೆ

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ ಮತ್ತು ತಾಂತ್ರಿಕ ಕೋರ್ಸ್‌ಗಳನ್ನು ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮವನ್ನು ನ.18ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಲ್ಯಾಪ್‌ಟಾಪ್ ನೀಡುವ ಸಂಬಂಧ ಈಗಾಗಲೇ ಟೆಂಡರ್ ಪೂರ್ಣಗೊಳಿಸಲಾಗಿದೆ. ಅಂದು ದಾವಣಗೆರೆಯ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಫಲಾನುಭವಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ಊಟೋಪಚಾರದ ವ್ಯವಸ್ಥೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT