ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಮನ ಬೇರೆಡೆ ಸೆಳೆದು ಕಳ್ಳತನ

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್ ಸೋರುತ್ತಿದೆ ಎಂದು ಸುಳ್ಳು ಹೇಳಿ ಮಹಿಳೆಯನ್ನು ಕಾರಿನಿಂದ ಕೆಳಗಿಳಿಸಿದ ದುಷ್ಕರ್ಮಿಯೊಬ್ಬ, ನಂತರ ಅವರ ಗಮನ ಬೇರೆಡೆ ಸೆಳೆದು ₹12 ಸಾವಿರ ನಗದು ಇದ್ದ ಬ್ಯಾಗ್, ಐ–ಫೋನ್ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೆಗೆದುಕೊಂಡು
ಪರಾರಿಯಾಗಿದ್ದಾನೆ.

ಅ.26ರ ಸಂಜೆ 4 ಗಂಟೆ ಸುಮಾರಿಗೆ ಕ್ರೆಸೆಂಟ್ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಶೇಷಾದ್ರಿಪುರ ನಿವಾಸಿ ರಿತಿಕಾ (33) ಅವರು ಹೈಗ್ರೌಂಡ್ಸ್‌ ಠಾಣೆಗೆ ದೂರು ಕೊಟ್ಟಿದ್ದಾರೆ. ಪೊಲೀಸರು ಸುತ್ತಮುತ್ತಲ ಸಿ.ಸಿ ಟಿ.ವಿ ಕ್ಯಾಮೆರಾಗಳ ಡಿವಿಆರ್‌ ಪೆಟ್ಟಿಗೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

‘ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ರಿತಿಕಾ, ಕೆಲಸ ಮುಗಿಸಿಕೊಂಡು ಸಂಜೆ 4 ಗಂಟೆ ಸುಮಾರಿಗೆ ಮನೆಗೆ ಹೋಗುತ್ತಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿ ಬಳಿ ಅವರಿಗೆ ಸಂಜ್ಞೆ ಮಾಡಿ ಕಾರು ನಿಲ್ಲಿಸಿದ ಬೈಕ್ ಸವಾರನೊಬ್ಬ, ‘ಪೆಟ್ರೋಲ್ ಸೋರುತ್ತಿದೆ ನೋಡಿ’ ಎಂದು ಹೇಳಿದ್ದಾನೆ.

ಆತನ ಮಾತನ್ನು ನಂಬಿದ ಅವರು ಪರಿಶೀಲಿಸಲು ಕಾರಿನಿಂದ ಕೆಳಗಿಳಿದಿದ್ದಾರೆ. ಈ ಹಂತದಲ್ಲಿ ಆರೋಪಿಯು ಸೀಟಿನ ಮೇಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾನೆ’ ಎಂದು ಹೈಗ್ರೌಂಡ್ಸ್ ಪೊಲೀಸರು ತಿಳಿಸಿದ್ದಾರೆ.

‘ರಿತಿಕಾ ಕಾರು ಪರಿಶೀಲಿಸಿ ವಾಪಸ್ ಬಂದಾಗ ಆ ಸವಾರ ನಾಪತ್ತೆಯಾಗಿದ್ದ. ಇದರಿಂದ ಅನುಮಾನಗೊಂಡ ಅವರು, ಕಾರಿನೊಳಗೆ ನೋಡಿದಾಗ ವಸ್ತುಗಳು ಕಳವಾಗಿರುವುದು ಗೊತ್ತಾಯಿತು. ಕೂಡಲೇ ಠಾಣೆಗೆ ಬಂದು ದೂರು ಕೊಟ್ಟಿದ್ದು, ಕಳ್ಳತನ (ಐಪಿಸಿ 279) ಹಾಗೂ ವಂಚನೆ (420) ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದೇವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT