ವಿಜಯಪುರದಲ್ಲಿ ಗುಂಡಿನ ಚಕಮಕಿ: ಪಿಎಸ್‌ಐಗೆ ಗಾಯ

ಬುಧವಾರ, ಜೂನ್ 19, 2019
25 °C

ವಿಜಯಪುರದಲ್ಲಿ ಗುಂಡಿನ ಚಕಮಕಿ: ಪಿಎಸ್‌ಐಗೆ ಗಾಯ

Published:
Updated:
ವಿಜಯಪುರದಲ್ಲಿ ಗುಂಡಿನ ಚಕಮಕಿ: ಪಿಎಸ್‌ಐಗೆ ಗಾಯ

ವಿಜಯಪುರ: ಅಕ್ರಮ ಶಸ್ತ್ರಾಸ್ತ್ರ ಪತ್ತೆಗೆ ತೆರಳಿದ್ದ ಪೊಲೀಸರ ತಂಡದ ಮೇಲೆ ರೌಡಿ ಶೀಟರ್‌ಗಳು ಸೋಮವಾರ ನಸುಕಿನಲ್ಲಿ ಗುಂಡಿನ ದಾಳಿ ನಡೆಸಿದ್ದು, ಚಡಚಣ ಪಿಎಸ್‌ಐ ಗೋಪಾಲ ಹಳ್ಳೂರ ಬಲಗೈಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ.

ರಾಜ್ಯದ ಗಡಿ ಗ್ರಾಮ ಕೊಂಕಣಗಾಂವ್‌ನಲ್ಲಿನ ರೌಡಿಶೀಟರ್ ಧರ್ಮರಾಜ ಚಡಚಣ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಪೊಲೀಸರು ಪ್ರತಿ ದಾಳಿ ನಡೆಸಿದ್ದು, ಧರ್ಮರಾಜ ಚಡಚಣ ಸೇರಿದಂತೆ ಇಬ್ಬರು ಸಹಚರರಿಗೆ ಗುಂಡು ತಗುಲಿದೆ. 

ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧರ್ಮರಾಜ ಚಡಚಣ ನಗರದ ಬಿಎಲ್‌ಇಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಎಸ್‌ಪಿ ಕುಲದೀಪ್ ಕುಮಾರ್ ತಿಳಿಸಿದ್ದಾರೆ.

ಕಣಗಾಂವ್ ಗ್ರಾಮದಲ್ಲಿ ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry