ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಿಗೇರಿ ಗ್ರಾಮದಲ್ಲಿ ಸ್ವಚ್ಛತೆ ಮಾಯ

Last Updated 30 ಅಕ್ಟೋಬರ್ 2017, 5:19 IST
ಅಕ್ಷರ ಗಾತ್ರ

ಕುರುಗೋಡು: ಇಲ್ಲಿಗೆ ಸಮೀಪದ ಸಿಂದಿಗೇರಿ ಗ್ರಾಮದ ಕುಂಬಾರು ಓಣಿ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ರಸ್ತೆಯ ಅಕ್ಕಪಕ್ಕದಲ್ಲಿ ವಾಸಿಸುವ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ.

ಕಲುಷಿತ ನೀರು ರಸ್ತೆಯಲ್ಲಿ ಸಂಗ್ರಹವಾಗುತ್ತಿರುವುದರಿಂದ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಈ ಭಾಗದಲ್ಲಿ ವಾಸಿಸುವ ಕೆಲವು ಜನರಲ್ಲಿ ಡೆಂಗಿ, ಚಿಕುನ್ ಗುನ್ಯಾ ಮತ್ತು ಮಲೇರಿಯಾ ರೋಗ ಲಕ್ಷಣ ಕಾಣಿಸಿಕೊಂಡಿದ್ದು, ಮತ್ತಷ್ಟು ಭಯ ಶುರುವಾಗಿದೆ.

ರಸ್ತೆಯ ಪಕ್ಕದಲ್ಲಿಯೇ ಪ್ರಗತಿ ಕೃಷ್ಣಗ್ರಾಮೀಣ ಬ್ಯಾಂಕ್ ಇದ್ದು, ಗ್ರಾಹಕರು ಈ ದುರ್ವಾಸನೆ ಬೀರುವ ಚರಂಡಿ ನೀರಿನಲ್ಲಿಯೇ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ತಲೆದೂರಿದೆ.

ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಅನೇಕ ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರುತ್ತಾರೆ ಸ್ಥಳೀಯ ನಿವಾಸಿ ವೀರೇಶ. ಸಮಸ್ಯೆ ಉಲ್ಬಣಗೊಳ್ಳುವ ಮೊದಲು ಗ್ರಾಮ ಪಂಚಾಯ್ತಿ ಕ್ರಮ ಕೈಗೊಂಡು ಪರಿಹಾರ ದೊರಕಿಸಿಕೊಡುವಂತೆ ಜನರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT