ರಸ್ತೆಯಲ್ಲಿ ಒಳಚರಂಡಿಯ ನೀರು : ಜನರಿಗೆ ತೊಂದರೆ

ಮಂಗಳವಾರ, ಜೂನ್ 25, 2019
25 °C

ರಸ್ತೆಯಲ್ಲಿ ಒಳಚರಂಡಿಯ ನೀರು : ಜನರಿಗೆ ತೊಂದರೆ

Published:
Updated:

ರಾಮನಗರ: ಇಲ್ಲಿನ ವಿವೇಕಾನಂದ ನಗರದಲ್ಲಿ ನಿರ್ಮಾಣವಾಗಿರುವ ನೂತನ ಬಡಾವಣೆಯ ಕಲುಷಿತ ನೀರು ಹೊರಕ್ಕೆ ಹೋಗಲು ಸಂಪರ್ಕ ಕಲ್ಪಿಸಿಲ್ಲ. ಇದರಿಂದ ಒಳಚರಂಡಿ ನೀರು ರಸ್ತೆಯ ಮಧ್ಯದಲ್ಲಿ ಹರಿಯುತ್ತಿದ್ದು ಜನರು ಮೂಗು ಮುಚ್ಚಿ ತಿರುಗುವಂತಾಗಿದೆ.

ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಹೊಸ ಬಡಾವಣೆಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲಾಗಿದೆ. ಆದರೂ ಇದಕ್ಕೆ ನಗರಸಭೆ ವತಿಯಿಂದ ಸಂಪರ್ಕ ನೀಡಿಲ್ಲ. ಹೀಗಾಗಿ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಮನೆಗಳ ಕಲುಷಿತ ನೀರು ಬಡಾವಣೆಯ ಹೊರಭಾಗದ ಚರಂಡಿಯಲ್ಲಿ ಬಂದು ನಿಲ್ಲುತ್ತಿದೆ. ಇದರಿಂದ ಸುತ್ತಲಿನ ಜನರು ದುರ್ವಾಸನೆಯಿಂದ ತೊಂದರೆಗೆ ಒಳಗಾಗಿದ್ದಾರೆ.

ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಕಲುಷಿತ ನೀರು ರಸ್ತೆಯ ಮಧ್ಯದಲ್ಲಿ ಹರಿದು ದುರ್ವಾಸನೆ ಬೀರುತ್ತಿದೆ. ಕೂಗಳತೆ ದೂರದಲ್ಲಿ ಶಾಲಾ, ಕಾಲೇಜು ಇದ್ದು ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಗುಂಡಿಯಲ್ಲಿ ಕಲುಷಿತ ನೀರು ನಿಂತಿದ್ದು ಸೊಳ್ಳೆಗಳ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಡೆಂಗಿ, ಚಿಕೂನ್‌ ಗುನ್ಯಾ ಭೀತಿಯೂ ಜನರಲ್ಲಿ ಎದುರಾಗಿದೆ.

ಈ ರಸ್ತೆಗಳಲ್ಲಿ ಬೆಳಿಗ್ಗೆ ನೂರಾರು ಜನರು ವಾಯುವಿಹಾರ ಮಾಡುತ್ತಿದ್ದಾರೆ. ಕಲುಷಿತ ನೀರಿನಿಂತ ಇತ್ತೀಚಿನ ದಿನಗಳಲ್ಲಿ ಇಲ್ಲಿ ನಡೆದಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಕೂಡಲೇ ನಗರಸಭೆ ಅಧಿಕಾರಿಗಳು, ಕಲುಷಿತ ನೀರು ಚರಂಡಿಯಲ್ಲಿ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಬೇಕು ಮತ್ತು ಭೂಗತ ಒಳಚರಂಡಿ ಸಂಪರ್ಕ ಕಲ್ಪಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry