ಪ್ರಧಾನಿ ಮೋದಿ ಬಂದು ಹೋದ್ರೆ ಕಾಂಗ್ರೆಸ್‌ಗೆ ಏನೂ ಆಗಲ್ಲ: ಸತೀಶ್ ಜಾರಕಿಹೊಳಿ

ಸೋಮವಾರ, ಮೇ 20, 2019
28 °C

ಪ್ರಧಾನಿ ಮೋದಿ ಬಂದು ಹೋದ್ರೆ ಕಾಂಗ್ರೆಸ್‌ಗೆ ಏನೂ ಆಗಲ್ಲ: ಸತೀಶ್ ಜಾರಕಿಹೊಳಿ

Published:
Updated:
ಪ್ರಧಾನಿ ಮೋದಿ ಬಂದು ಹೋದ್ರೆ ಕಾಂಗ್ರೆಸ್‌ಗೆ ಏನೂ ಆಗಲ್ಲ: ಸತೀಶ್ ಜಾರಕಿಹೊಳಿ

ಚಿತ್ರದುರ್ಗ: ಪ್ರಧಾನಿ ಮೋದಿ ಒಂದು ದಿನ ರಾಜ್ಯಕ್ಕೆ ಬಂದು ಹೋಗಿರುವುದರಿಂದ ಕಾಂಗ್ರೆಸ್ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ, ಯಾವ ಬದಲಾವಣೆಯೂ ಆಗುವುದಿಲ್ಲ’ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್  ಜಾರಕಿಹೊಳಿ ಅಭಿಪ್ರಾಯಪಟ್ಟರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಮೋದಿ ಹವಾ ಕಾಂಗ್ರೆಸ್‌ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದರು.

ಚುನಾವಣೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನೀಡುವ ಕುರಿತು ಕೇಳಿದ ಪ್ರಶ್ನೆಗೆ, ‘ಸೋಲುವಂತಹ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ. ಆದರೆ, ಸಚಿವರಿಗೆ ಟಿಕೆಟ್ ತಪ್ಪುವಂತಹ ಯಾವುದೇ ಪ್ರಸ್ತಾಪ ಇದ್ದಂತಿಲ್ಲ. ಇದಕ್ಕೂ ಮುನ್ನ ಪಕ್ಷ ಸಮೀಕ್ಷೆ ನಡೆಸಿ, ತೀರ್ಮಾನ ಕೈಗೊಳ್ಳುತ್ತದೆ’ ಎಂದರು.

‘ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತದೆ ಎಂದು ಸಮೀಕ್ಷೆಗಳು ಹೇಳಿವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯವರು, ಪಕ್ಷದ ಕೆಲವು ಮುಖಂಡರು ಸೇರಿದಂತೆ, ಖಾಸಗಿ ವಲಯದಿಂದಲೂ ಸಮೀಕ್ಷೆ ಮಾಡಿಸುವ ಸಾಧ್ಯತೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry