ದೇವರ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದವರು ಗೊಂದಲ ಮೂಡಿಸುತ್ತಿದ್ದಾರೆ: ಸಿದ್ದರಾಮಯ್ಯ

ಮಂಗಳವಾರ, ಜೂನ್ 18, 2019
25 °C

ದೇವರ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದವರು ಗೊಂದಲ ಮೂಡಿಸುತ್ತಿದ್ದಾರೆ: ಸಿದ್ದರಾಮಯ್ಯ

Published:
Updated:
ದೇವರ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದವರು ಗೊಂದಲ ಮೂಡಿಸುತ್ತಿದ್ದಾರೆ: ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ‘ದೇವರ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದವರು ದೇವರ ಬಗ್ಗೆ ಗೊಂದಲ ಮೂಡಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇವರು ಗುಡಿಯಲ್ಲಿದ್ದಾನೆ ಎಂಬುದು ಕೂಡಾ ತಪ್ಪು ಕಲ್ಪನೆ. ದೇವರಿಗೆ ಶುದ್ಧ ಮನಸ್ಸು ಬೇಕು. ದೇವರು ಆಡಂಬರಗಳನ್ನು ಬಯಸುವುದಿಲ್ಲ. ನಾವು ಆತ್ಮಸಾಕ್ಷಿಯಂತೆ ನಡೆದುಕೊಂಡರೆ ಸಾಕು’ ಎಂದರು.

‘ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾತ್ರ ಧರ್ಮಸ್ಥಳಕ್ಕೆ ಹೋಗಿದ್ದೆ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನಕ್ಕೆ ಬರುವಂತೆ ಮನವಿ ಮಾಡಿದರು. ಹೀಗಾಗಿ ನಾನು ದೇವಸ್ಥಾನಕ್ಕೆ ಹೋಗಿದ್ದೆ’ ಎಂದು ಅವರು ಹೇಳಿದರು.

‘ಯಾವ ಆಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಬೇಕು ಎಂಬ ಕಟ್ಟುಪಾಡು ಸರಿಯಲ್ಲ. ಬೇಡರ ಕಣ್ಣಪ್ಪ ದೇವರಿಗೆ ಮಾಂಸವನ್ನೇ ನೈವೇದ್ಯವಾಗಿ ಅರ್ಪಿಸಿದ್ದ. ಆತ್ಮಶುದ್ಧವಾಗಿದ್ದರೆ ಅದೇ ಭಗವಂತನಿಗೆ ಅರ್ಪಿಸುವ ನೈವೇದ್ಯ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry