ಬಿಜೆಪಿ ಯಾವ ಯಾತ್ರೆ ಮಾಡಿದರೂ ಜನ ಬದಲಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಭಾನುವಾರ, ಜೂನ್ 16, 2019
29 °C

ಬಿಜೆಪಿ ಯಾವ ಯಾತ್ರೆ ಮಾಡಿದರೂ ಜನ ಬದಲಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Published:
Updated:
ಬಿಜೆಪಿ ಯಾವ ಯಾತ್ರೆ ಮಾಡಿದರೂ ಜನ ಬದಲಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: 'ಬಿಜೆಪಿಯವರು ರಾಜ್ಯದಲ್ಲಿ ಯಾವ ಯಾತ್ರೆ ಮಾಡಿದರೂ ಜನ ಬದಲಾಗುವುದಿಲ್ಲ. ಬಿಜೆಪಿಯವರು ತಮ್ಮ ಅಧಿಕಾರ ಅವಧಿಯಲ್ಲಿ ತಾವೇ ಪರಿವರ್ತನೆಯಾದರು. ಹೀಗಾಗಿ ಜನ ಅವರ ವಿರುದ್ಧವಾಗಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ತಾಲ್ಲೂಕಿನ ಮಂಚನಬಲೆಯಲ್ಲಿ ಸೋಮವಾರ ಆಯೋಜಿಸಿದ್ದ ಬೀರೇಶ್ವರ, ಆನೆ ದೇವರು, ಚೌಡೇಶ್ವರಿ ಮತ್ತು ಸಿದ್ದೇ ದೇವರ ದೇವಾಲಯ ಉದ್ಘಾಟನಾ ಸಮಾರಂಭಕ್ಕೆ ಬಂದ ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

'ರಾಜ್ಯದಲ್ಲಿ ಮೋದಿ ಅಲೆ ಕೆಲಸ ಮಾಡುವುದಿಲ್ಲ. ಅವರು ಬಂದ ತಕ್ಷಣ ಜನರ ಮನೋಭಾವ ಬದಲಾಗುವುದಿಲ್ಲ. ಜನರ ಭಾವನೆ ಬದಲಿಸಲು ಅವರೇನು ಮಂತ್ರದಂಡ ಇಟ್ಟುಕೊಂಡಿದ್ದರಾ?  ಇಲ್ಲಾ ಮ್ಯಾಜಿಕ್ ಮಾಡ್ತಾರಾ' ಎಂದರು.

'ಪಿ.ಜಿ.ಆರ್.ಸಿಂಧ್ಯಾ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಸುಳ್ಳು ಸುದ್ದಿ. ಸಿಂಧ್ಯಾ ಅವರಿಗೂ ವರುಣಾ ಕ್ಷೇತ್ರಕ್ಕೂ ಏನು ಸಂಬಂಧ? ಇದು ಹೇಗೆ ಸುದ್ದಿಯಾಗಿದೆಯೊ ಗೋತ್ತಿಲ್ಲಾ' ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry