ಬೆಂಗಳೂರು: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಖಾಸಗಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ ದಿನಾಂಕವನ್ನು ನ.10ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ನ.13ರೊಳಗೆ ಎನ್ಇಎಫ್ಟಿ ಮೂಲಕ ಬ್ಯಾಂಕ್ಗೆ ಜಮೆ ಮಾಡಬೇಕು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.