ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಬ್ಯಾಡ್ಮಿಂಟನ್‌: ಭಾರತಕ್ಕೆ ಆರು ಪದಕ

Last Updated 30 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ತಂಡದವರು ಅಮೆರಿಕದ ಕೊಲಾರಡೊ ಸ್ಪ್ರಿಂಗ್ಸ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಎಂಟು ಪದಕಗಳನ್ನು ಗೆದ್ದಿದ್ದಾರೆ.

ಭಾನುವಾರ ನಡೆದ ಪುರುಷರ ಎಸ್‌ಎಸ್‌ 6 ವಿಭಾಗದ ಡಬಲ್ಸ್‌ನಲ್ಲಿ ಮಾರ್ಕ್‌ ಚಿನ್ನಕ್ಕೆ ಕೊರಳೊಡ್ಡಿದರು. ಮಿಶ್ರ ಡಬಲ್ಸ್‌ನಲ್ಲಿ ಅವರು ಬೆಳ್ಳಿ ಜಯಿಸಿದರು.

ಎಸ್‌ಎಲ್‌ 3 ಮತ್ತು ಎಸ್‌ಎಲ್‌ 4 ವಿಭಾಗಗಳಲ್ಲಿ ಸ್ಪರ್ಧಿಸಿದ್ದ ಆನಂದ್‌ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ನಲ್ಲಿ ಬೆಳ್ಳಿಯ ಸಾಧನೆ ಮಾಡಿದರು.
ಎಸ್‌ಯು 5 ವಿಭಾಗದ ಡಬಲ್ಸ್‌ನಲ್ಲಿ ಸತ್ಯಂ, ಕಂಚು ತಮ್ಮದಾಗಿಸಿಕೊಂಡರು.

ಮಹಿಳೆಯರ ಎಸ್‌ಎಲ್‌–4 ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಸವಾಲು ಎತ್ತಿ ಹಿಡಿದಿದ್ದ ಮಾನಸಿ  ಕಂಚಿಗೆ ಕೊರಳೊಡ್ಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT