ರ‍್ಯಾಂಕಿಂಗ್: ಮೂರನೇ ಸ್ಥಾನಕ್ಕೆ ವೋಜ್ನಿಯಾಕಿ

ಮಂಗಳವಾರ, ಜೂನ್ 18, 2019
24 °C

ರ‍್ಯಾಂಕಿಂಗ್: ಮೂರನೇ ಸ್ಥಾನಕ್ಕೆ ವೋಜ್ನಿಯಾಕಿ

Published:
Updated:
ರ‍್ಯಾಂಕಿಂಗ್: ಮೂರನೇ ಸ್ಥಾನಕ್ಕೆ ವೋಜ್ನಿಯಾಕಿ

ಪ್ಯಾರಿಸ್‌: ಸಿಮೊನಾ ಹಲೆಪ್‌ ಸೋಮವಾರ ಬಿಡುಗಡೆಯಾದ ಡಬ್ಲ್ಯುಟಿಎ ಟೆನಿಸ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಕರೊಲಿನಾ ವೋಜ್ನಿಯಾಕಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ಡಬ್ಲ್ಯುಟಿಎ ಫೈನಲ್ಸ್ ಟೂರ್ನಿಯಲ್ಲಿ ಭಾನುವಾರ ಪ್ರಶಸ್ತಿ ಗೆದ್ದುಕೊಂಡಿದ್ದ ಡೆನ್ಮಾರ್ಕ್‌ನ ವೋಜ್ನಿಯಾಕಿ ಮೂರು ಸ್ಥಾನಗಳಲ್ಲಿ ಬಡ್ತಿ ಪಡೆದಿದ್ದಾರೆ. ಫೈನಲ್‌ ನಲ್ಲಿ ಅವರು ಅಮೆರಿಕದ ವೀನಸ್‌ ವಿಲಿಯಮ್ಸ್ ಅವರನ್ನು ಮಣಿಸಿದ್ದರು. ಸಿಂಗಪುರ ಓಪನ್‌ನಲ್ಲಿ ಕೂಡ ಅವರು ಪ್ರಶಸ್ತಿ ಎತ್ತಿಹಿಡಿದಿದ್ದರು.

ಡಬ್ಲ್ಯುಟಿಎ ಫೈನಲ್ಸ್‌ನಲ್ಲಿ ಹಲೆಪ್‌ ಆರಂಭಿಕ ಸುತ್ತುಗಳಲ್ಲೇ ಸೋಲು ಕಂಡಿದ್ದರು. ಅಕ್ಟೋಬರ್ ಮೊದಲ ವಾರದಲ್ಲಿ ಅವರು ಮೊದಲ ಬಾರಿಗೆ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರು. ಗಾರ್ಬೈನ್ ಮುಗುರುಜಾ ಎರಡನೇ ಸ್ಥಾನದಲ್ಲಿ ಇದ್ದಾರೆ. ಜೆಕ್ ಗಣರಾಜ್ಯದ ಕರೊಲಿನಾ ಪ್ಲಿಸ್ಕೋವಾ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry